ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಜೀವ ಬೆದರಿಕೆ ಇರುವ ಸಂಬಂಧ ಮಾಧ್ಯಮಗಳಲ್ಲಿ ಬಂದಿರುವ ವರದಿಗಳನ್ನು ನಾನು ನೋಡಿದ್ದೇನೆ. ಈ ವಿಚಾರವಾಗಿ ನಾನು ಅವರೊಂದಿಗೆ ಮಾತನಾಡಿದ್ದೇನೆ. ಅವರಿಗೆ ಸೂಕ್ತ ಭದ್ರತೆ ಒದಗಿಸುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಲಾಗಿದೆ ಎಂದು ಸಿಎಂ ಬೊಮ್ಮಯಿ ಹೇಳಿದ್ದಾರೆ.
ಅಷ್ಟೇ ಅಲ್ಲದೇ, ಕೊಡಗು ಜಿಲ್ಲೆಯಲ್ಲಿ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಮೊಟ್ಟೆ ಎಸೆದ ಘಟನೆಯನ್ನೂ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಅವರಿಗೆ ಸೂಕ್ತ ಭದ್ರತೆ ನೀಡಲಾಗುವುದು ಎಂದು ಬೊಮ್ಮಾಯಿ ತಿಳಿಸಿದರು.
ಶುಕ್ರವಾರ ಬೆಂಗಳೂರಿನಲ್ಲಿರುವ ತಮ್ಮ ನಿವಾಸದಲ್ಲಿ ಮಾತನಾಡಿದ ಅವರು, ಈ ವಿಚಾರವಾಗಿ ಈಗಾಗಲೇ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರ ಜೊತೆ ಮಾತನಾಡಿದ್ಧೇನೆ. ಅವರಿಗೆ ಜೀವ ಬೆದರಿಗೆ ಇದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಹೀಗಾಗಿ, ನಾವು ಈ ವಿಚಾರವನ್ನು ಗಂಭೀರವಾಗಿ ತೆಗೆದುಕೊಂಡಿದ್ದು, ಭದ್ರತೆಗೆ ಸೂಚಿಸಲಾಗಿದೆ. ಈ ಬಗ್ಗೆ ಡಿಜಿ ಅವರ ಬಳಿಯೂ ಮಾತನಾಡಿದ್ದೇನೆ ಎಂದರು.
Big news: ʻಮಂಕಿಪಾಕ್ಸ್ʼಸೋಂಕಿನ ಆರಂಭಿಕ ಪತ್ತೆಗಾಗಿ ಭಾರತದ ಮೊದಲ ಸ್ಥಳೀಯ ಆರ್ಟಿ-ಪಿಸಿಆರ್ ಕಿಟ್ ಬಿಡುಗಡೆ!
Breaking news: ಖ್ಯಾತ ಲೇಖಕ, ಕನ್ನಡಪರ ಹೋರಾಟಗಾರ ʻಉದಯ ಧರ್ಮಸ್ಧಳʼ ಇನ್ನಿಲ್ಲ | Udaya Dharmasthala no more