ವಿಜಯಪುರ : ರಾಜ್ಯದಲ್ಲಿ ಎಸ್ ಡಿಪಿಐ, ಪಿಎಫ್ ಐ ಸಂಘಟನೆಗಳು ಬೆಳೆಯಲು ಮಾಜಿ ಸಿಎಂ ಸಿದ್ದರಾಮಯ್ಯನವರೇ ಕಾರಣ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಗಂಭೀರ ಆರೋಪ ಮಾಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಡಿ ರಾಜ್ಯದಲ್ಲಿ SDPI ಹಾಗೂ PFI ಬೆಳೆಯಲು ಕಾರಣವೇ ಸಿದ್ದರಾಮಯ್ಯ. ಸಿದ್ದರಾಮಯ್ಯ ಅವಧಿಯಲ್ಲೆ ದೇಶ ವಿರೋಧಿ ಸಂಘಟನೆಗಳು ಬೆಳೆದಿವೆ. ನಮ್ಮ ಸರ್ಕಾರ ಈಗ ಗಟ್ಟಿ ನಿರ್ಧಾರ ತೆಗೆದುಕೊಂಡಿದೆ. ದೇಶಾದ್ಯಂತ ರಾಷ್ಟ್ರೀಯ ತನಿಖಾ ದಳದಾಳಿ ನಡೆಸಿದೆ ಎಂದರು.
ಪಿಎಫ್ ಐ ನಿಷೇಧಕ್ಕೆ ದೇಶಭಕ್ತರ ಬೇಡಿಕೆ ಇದೆ. ಅದಕ್ಕೆ ಸಾಕ್ಷ್ಯಾಧಾರಗಳ ಸಂಗ್ರಹ ನಡೆಯುತ್ತಿದೆ. ಎಸ್ ಡಿಪಿಐ ಹಾಗೂ ಪಿಎಫ್ ಐ ನಿಷೇಧದ ಬಗ್ಗೆ ನಮ್ಮ ಸರ್ಕಾರ ಕಟ್ಟುನಿಟ್ಟಿನ ಕ್ರಮದ ಜೊತೆಗೆ ಗಟ್ಟಿ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಹೇಳಿದ್ದಾರೆ.