ಬೆಂಗಳೂರು: ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಚಿಕ್ಕಮಗಳೂರಿಗೆ ಭೇಟಿ ನೀಡಲಿದ್ದಾರೆ. ಮುನ್ನಚ್ಚರಿಕೆಯಿಂದ ಸಿದ್ದರಾಮಯ್ಯ ಅವರಿಗೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿದೆ.
ಚಿಕ್ಕಮಗಳೂರಿನಲ್ಲಿ ಭಾರೀ ಮಳೆಯಿಂದ ಹಾನಿಗೊಳಗಾದ ಕೊಪ್ಪ, ಶೃಂಗೇರಿ, ಮೂಡಿಗೆರೆ ತಾಲೂಕಿಗೆ ಸಿದ್ದರಾಮಯ್ಯ ಭೇಟಿ ನೀಡಲಿದ್ದು, ಪರಿಶೀಲನೆ ನಡೆಸಲಿದ್ದಾರೆ.
ನಿನ್ನೆ ಕೊಡಗಿನಲ್ಲಿ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿಗೆ ಭೇಟಿ ನೀಡಲಿರುವ ಸಿದ್ದರಾಮಯ್ಯ ಅವರಿಗೆ ಪೊಲೀಸ್ ಇಲಾಖೆ ಎಎಸ್ಪಿ ನೇತೃತ್ವದಲ್ಲಿ ಭದ್ರತೆ ಕಲ್ಪಿಸಿದೆ.
ಶಿವಮೊಗ್ಗ: ಇಂದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut