ಬೆಳಗಾವಿ: ಗೋವಾದ ಮಾಜಿ ಶಾಸಕರಾಗಿದ್ದಂತ ಲಾವೂ ಮಾಮಲೇದಾರ್(69) ಮೇಲೆ ಆಟೋ ಚಾಲಕನೊಬ್ಬ ಹಲ್ಲೆ ಮಾಡಿದ್ದರು. ಈ ಹಲ್ಲೆಯ ಬಳಿಕ ಕುಸಿದು ಬಿದ್ದಿದ್ದಂತ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ.
ಗೋವಾದ ಮಾಜಿ ಶಾಸಕ ಲಾವೂ ಮಾಮಲೇದಾರ್ ಅವರ ಮೇಲೆ ಬೆಳಗಾವಿಯಲ್ಲಿ ಆಟೋ ಚಾಲಕನಿಂದ ಹಲ್ಲೆ ನಡೆಸಲಾಗಿತ್ತು. ಅವರನ್ನು ಕೂಡಲೇ ಬಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.
ಬೆಳಗಾವಿಯ ಡಿಸಿಪಿ ರೋಹನ್ ಜಗದೀಶ್ ಆಸ್ಪತ್ರೆಗೆ ಭೇಟಿ ನೀಡಿ, ಪರಿಶೀಲಿಸಿದರು. ಈ ಸಂಬಂಧ ಆಟೋ ಚಾಲಕನನ್ನು ವಶಕ್ಕೆ ಪೊಲೀಸರು ಪಡೆದಿದ್ದಾರೆ. ತನಿಖೆ ಪ್ರಗತಿಯಲ್ಲಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
ಮಲೆನಾಡಿನ ‘APL ಕಾರ್ಡ್’ದಾರರಿಗೆ ಗುಡ್ ನ್ಯೂಸ್: ಮಂಗನ ಕಾಯಿಲೆಗೆ ‘ಉಚಿತ ಚಿಕಿತ್ಸೆ’
ALERT : ರಾಜ್ಯದ ಕಾರ್ಮಿಕರೇ ಎಚ್ಚರ : ಮೋಸದ ಕರೆಗಳು ಬಂದ್ರೆ ತಕ್ಷಣ ಅಧಿಕಾರಿಗಳ ಗಮನಕ್ಕೆ ತನ್ನಿ.!