ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯ ಪಾಲ್ ಮಲಿಕ್ ಅವರು ದೀರ್ಘಕಾಲದ ಅನಾರೋಗ್ಯದ ನಂತರ ಮಂಗಳವಾರ ತಮ್ಮ 79 ನೇ ವಯಸ್ಸಿನಲ್ಲಿ ನಿಧನರಾದರು.
Former J&K Governor Satyapal Malik passes away at Delhi's Ram Manohar Lohia Hospital after a prolonged illness, confirms his PS, KS Rana. pic.twitter.com/4fwS7Z5Qv6
— ANI (@ANI) August 5, 2025
ಜಮ್ಮು ಮತ್ತು ಕಾಶ್ಮೀರ, ಗೋವಾ ಮತ್ತು ಮೇಘಾಲಯದ ರಾಜ್ಯಪಾಲರಾಗಿದ್ದ ಸತ್ಯಪಾಲ್ ಮಲಿಕ್ ಅವರು ಮಂಗಳವಾರ, 5 ಆಗಸ್ಟ್ 2025 ರಂದು ನಿಧನರಾದರು. ಹಲವು ದಿನಗಳ ಕಾಲ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಸತ್ಯಪಾಲ್ ಮಲಿಕ್ ಅವರು ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು. ಸತ್ಯಪಾಲ್ ಮಲಿಕ್ ಅವರ ಸಾವಿನ ಬಗ್ಗೆ ಅವರ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ಮಾಹಿತಿ ನೀಡಲಾಗಿದೆ. ಸತ್ಯಪಾಲ್ ಮಲಿಕ್ ಬಿಹಾರದ ರಾಜ್ಯಪಾಲರೂ ಆಗಿದ್ದರು.