ತುಮಕೂರು ; ರಾಜ್ಯ ವಿಧಾನಸಭೆ ಚುನಾವಣೆ ಹೊತ್ತಲ್ಲೇ ಜೆಡಿಎಸ್ ನ ಮತ್ತೊಂದು ವಿಕೆಟ್ ಪತನವಾಗಿದ್ದು, ಜೆಡಿಎಸ್ ಮಾಜಿ ಶಾಸಕ ಹೆಚ್. ನಿಂಗಪ್ಪ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.
BREAKING NEWS : ತುಮಕೂರಿನ ಸಿದ್ದಗಂಗಾಮಠದಿಂದ ವಿದ್ಯಾರ್ಥಿ ನಾಪತ್ತೆ!
ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂಗೆ ಹೆಚ್.ನಿಮಗಪ್ಪ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ. ಜೆಡಿಎಸ್ ಪಕ್ಷದ ಚಟುವಟಿಕೆಗಳಿಂದ ದೂರ ಇಟ್ಟಿದ್ದಕ್ಕೆ ಮಾಜಿ ಶಾಸಕ ಹೆಚ್.ನಿಂಗಪ್ಪ ಅಸಮಾಧಾನಗೊಂಡಿದ್ದರು. ಹೀಗಾಗಿ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ ಎಂದು ರಾಜೀನಾಮೆಯಲ್ಲಿ ಉಲ್ಲೇಖಿಸಿದ್ದಾರೆ.
2006 ರಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕರಾಗಿದ್ದ ಹೆಚ್. ನಿಂಗಪ್ಪ, 2013 ರಲ್ಲಿ ಜೆಡಿಎಸ್ ಬಿಟ್ಟು ಕೆಜೆಪಿಯಿಂದ ಸ್ಪರ್ಧಿಸಿದ್ದರು. ಬಳಿಕ 2018 ರಲ್ಲಿ ಜೆಡಿಎಸ್ ಸೇರ್ಪಡೆಯಾಗಿದ್ದರು. ಇದೀಗ ಮತ್ತೆ ಜೆಡಿಎಸ್ ಗೆ ರಾಜೀನಾಮೆ ನೀಡಿದ್ದು, ಕಾಂಗ್ರೆಸ್ ಗೆ ಸೇರುವ ನಿರ್ಧಾರ ಕೈಗೊಂಡಿದ್ದಾರೆ ಎನ್ನಲಾಗಿದೆ.
BIGG NEWS : ಹೋಟೆಲ್ ಗ್ರಾಹಕರಿಗೆ ಬಿಗ್ ಶಾಕ್ : ರಾಜ್ಯದಲ್ಲಿ ಮತ್ತೆ ಹೋಟೆಲ್ ತಿಂಡಿ, ಊಟ ದರ ಏರಿಕೆ