ಬೆಂಗಳೂರು/ ನವದೆಹಲಿ : ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಈ ನಡುವೆ ವಿಧಾನಸಭಾ ಚುನಾವಣೆ ಬಳಿಕ ಪಡೆದುಕೊಂಡಿದ್ದ ವಿಧಾನಪರಿಷತ್ ಸ್ಥಾನಕ್ಕೂ ನಾನು ರಾಜೀನಾಮೆ ನೀಡಿದ್ದೇನೆ. ಇ-ಮೇಲ್ ಮೂಲಕ ರಾಜೀನಾಮೆ ರವಾನಿಸಿದ್ದೇನೆ ಎಂದು ಅವರು ಹೇಳಿದ್ದಾರೆ.
ಇಂದು ನವದೆಹಲಿಯಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ಸಮ್ಮುಖದಲ್ಲಿ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿಗೆ ಸೇರ್ಪಡೆಯಾದರು. ಇನ್ನೂ ಜಗದೀಶ್ ಶೆಟ್ಟರ್ ಅವರ ರಾಜೀನಾಮೆಗೆ ಸಂಬಂಧಪಟ್ಟಂತೆ ಕಿಡಿಕಾರಿರುವ ಡಿ.ಕೆ ಶಿವಕುಮಾರ್ ಅವರು ಬಲವಂತದಿಂದ ಅವರನ್ನು ಕರೆದಕೊಂಡು ಹೋಗಿದ್ದಾರೆ ಅಂತ ಹೇಳಿದರು. ಇನ್ನೂ ಕಾಂಗ್ರೆಸ್‌ನಲ್ಲಿ ನಡೆಯುವ ವ್ಯವಸ್ಥೆಯೇ ಬೇರೆ, ಬಿಜೆಪಿಯಲ್ಲಿ ನಡೆಯುವ ವ್ಯವಸ್ಥೆಯೇ ಬೇರೆ, ನನಗೆ ಇಲ್ಲಿ ತನಕ ಯಾವುದೇ ರಾಜೀನಾಮೆ ಪತ್ರ ಬಂದಿಲ್ಲ ಅಂತ ಹೇಳಿದರು.
On re-joining BJP, former Karnataka CM Jagadish Shettar says, "The party gave me a lot of responsibilities in the past. Due to some issues, I went to the Congress party. In the last 8-9 months, there were a lot of discussions, also BJP workers asked me to come back to the BJP.… pic.twitter.com/Es7R7CqGgz
— ANI (@ANI) January 25, 2024