ಬೆಂಗಳೂರು: ಕರ್ನಾಟಕದ 38ನೇ ಡಿಜಿ ಮತ್ತು ಐಜಿಪಿಯಾಗಿದ್ದಂತ ಓಂ ಪ್ರಕಾಶ್ ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ತಮ್ಮ ಮನೆಯಲ್ಲೇ ರಕ್ತದ ಮಡುವಿನಲ್ಲಿ ಮಾಜಿ ಪೊಲೀಸ್ ಮಹಾನಿರ್ದೇಶಕ ಶವವಾಗಿ ಪತ್ತೆಯಾಗಿದ್ದಾರೆ.
2015ರಲ್ಲಿ ಕರ್ನಾಟಕದ ಡಿಜಿ ಮತ್ತು ಐಜಿಪಿಯಾಗಿದ್ದವರು ಓಂ ಪ್ರಕಾಶ್. 68 ವರ್ಷದ ಅವರನ್ನು ಕೊಲೆ ಮಾಡಿರೋದಾಗಿ ಹೇಳಲಾಗುತ್ತಿದೆ. ಬೆಂಗಳೂರಿನ ಹೆಚ್ ಎಸ್ ಆರ್ ಲೇಔಟ್ ನಲ್ಲಿ ವಾಸವಾಗಿದ್ದಂತ ಓಂ ಪ್ರಕಾಶ್ ರಕ್ತದ ಮಡುವಿನಲ್ಲಿ ಪತ್ತೆಯಾಗಿರೋದಾಗಿ ಮಾಹಿತಿಯನ್ನು ಪತ್ನಿ ಹಂಚಿಕೊಂಡಿದ್ದಾರೆ.
ಬೆಂಗಳೂರಿನ ಹೆಚ್ ಎಸ್ ಆರ್ ಲೇಔಟ್ ನಲ್ಲಿ ಮನೆಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದಂತ ಅವರು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಅವರನ್ನು ಪತ್ನಿಯೇ ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎನ್ನಲಾಗುತ್ತಿದೆ. ಇದೀಗ ಸ್ಥಳಕ್ಕೆ ದೌಡಾಯಿಸಿರುವಂತ ಪೊಲೀಸರು, ಪರಿಶೀಲನೆ ನಡೆಸುತ್ತಿದ್ದಾರೆ.
1981ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿದ್ದಂತ ಓಂ ಪ್ರಕಾಶ್ ಅವರು, ಇಂದು ನಿಧನರಾಗುವ ಮೂಲಕ ಇನ್ನಿಲ್ಲವಾಗಿದ್ದಾರೆ.
ವಿದ್ಯಾರ್ಥಿಗಳ ಜನಿವಾರ ಕಳಚಿದ ಪ್ರಕರಣದಲ್ಲಿ ಯಾರೇ ತಪ್ಪು ಮಾಡಿದ್ದರೂ ಶಿಕ್ಷೆ ನೀಡಲು ಸರ್ಕಾರ ಬದ್ಧ: DKS
BIG NEWS: ಎಲ್ಲಾ ಪೌರ ಕಾರ್ಮಿಕರನ್ನು ಖಾಯಂ, ಗುತ್ತಿಗೆ ನೌಕರರಿಗೆ ಕನಿಷ್ಠ ವೇತನ: ಸಿಎಂ ಸಿದ್ದರಾಮಯ್ಯ ಘೋಷಣೆ