ಬೆಂಗಳೂರು: ಮಾಜಿ ಸಚಿವರಾದ ಬಿ.ಸುಬ್ಬಯ್ಯ ಶೆಟ್ಟಿ ಅವರ ನಿಧನರಾಗಿದ್ದಾರೆ. ಈ ಮೂಲಕ ಮಾಜಿ ಸಚಿವ ಬಿ.ಸುಬ್ಬಯ್ಯ ಶೆಟ್ಟಿ ಇನ್ನಿಲ್ಲವಾಗಿದ್ದಾರೆ. ಅವರ ನಿಧನಕ್ಕೆ ಸಿಎಂ ಸಿದ್ಧರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಮಾಜಿ ಸಚಿವ ಬಿ.ಸುಬ್ಬಯ್ಯ ಶೆಟ್ಟಿ ಅವರ ನಿಧನದಿಂದ ದುಃಖಿತನಾಗಿದ್ದೇನೆ. ಬದ್ಧತೆ, ಪ್ರಾಮಾಣಿಕತೆ ಮತ್ತು ಜನಪರ ಕಾಳಜಿಗಳನ್ನು ರಾಜಕೀಯ ಜೀವನದುದ್ದಕ್ಕೂ ವ್ರತದಂತೆ ಪಾಲಿಸಿಕೊಂಡು ಬಂದಿದ್ದ ಸುಬ್ಬಯ್ಯ ಶೆಟ್ಟಿಯವರು ಅಪರೂಪದ ಮುತ್ಸದ್ದಿ ರಾಜಕಾರಣಿ ಎಂದಿದ್ದಾರೆ.
ದೇವರಾಜ ಅರಸು ಅವರ ಸಂಪುಟದಲ್ಲಿ ಭೂ ಸುಧಾರಣಾ ಸಚಿವರಾಗಿದ್ದ ಸುಬ್ಬಯ್ಯ ಶೆಟ್ಟಿಯವರು ಉಳುವವನನ್ನೇ ಭೂಮಿಯ ಒಡೆಯನನ್ನಾಗಿ ಮಾಡಿದ ಕಾಯ್ದೆ ರಾಜ್ಯದಲ್ಲಿ ಯಶಸ್ವಿಯಾಗಿ ಅನುಷ್ಠಾನಕ್ಕೆ ಬರಲು ಕಾರಣಿಕರ್ತರು. ಸುಬ್ಬಯ್ಯ ಶೆಟ್ಟಿಯವರನ್ನು ಕಳೆದುಕೊಂಡ ಪತ್ನಿ, ಮಕ್ಕಳು ಮತ್ತು ಅಪಾರ ಅಭಿಮಾನಿಗಳ ಶೋಕದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂಬುದಾಗಿ ತಿಳಿಸಿದ್ದಾರೆ.
ಮಾಜಿ ಸಚಿವರಾದ ಬಿ.ಸುಬ್ಬಯ್ಯ ಶೆಟ್ಟಿ ಅವರ ನಿಧನದಿಂದ ದುಃಖಿತನಾಗಿದ್ದೇನೆ.
ಬದ್ಧತೆ, ಪ್ರಾಮಾಣಿಕತೆ ಮತ್ತು ಜನಪರ ಕಾಳಜಿಗಳನ್ನು ರಾಜಕೀಯ ಜೀವನದುದ್ದಕ್ಕೂ ವ್ರತದಂತೆ ಪಾಲಿಸಿಕೊಂಡು ಬಂದಿದ್ದ ಸುಬ್ಬಯ್ಯ ಶೆಟ್ಟಿಯವರು ಅಪರೂಪದ ಮುತ್ಸದ್ದಿ ರಾಜಕಾರಣಿ.
ದೇವರಾಜ ಅರಸು ಅವರ ಸಂಪುಟದಲ್ಲಿ ಭೂ ಸುಧಾರಣಾ ಸಚಿವರಾಗಿದ್ದ ಸುಬ್ಬಯ್ಯ ಶೆಟ್ಟಿಯವರು… pic.twitter.com/B0mM6qvTrD
— Siddaramaiah (@siddaramaiah) March 10, 2025
ಪೂರ್ತಿ ಮರುಪಾವತಿ ಮಾಡಿದರೂ ಸಾಲ ವಸೂಲಾತಿ ನಿಲ್ಲಿಸದ ‘ಟಾಟಾ ಕ್ಯಾಪಿಟಲ್ ಫೈನಾನ್ಸ್’ಗೆ ದಂಡ