ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದ ರೌಡಿಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿದ್ದ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಬೈರತಿ ಬಸವರಾಜ್ ಅವರು ಇಂದು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಿಂದ ಬಿಡುಗಡೆಯಾಗಿದ್ದಾರೆ. ಈ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ವಿಚಾರಣೆ ಎದುರಿಸುತ್ತಿದ್ದ ಅವರಿಗೆ ನಿನ್ನೆಯಷ್ಟೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಜಾಮೀನು ಮಂಜೂರು ಮಾಡಿ ಆದೇಶಿಸಿತ್ತು.
ನ್ಯಾಯಾಲಯದ ಬಿಡುಗಡೆ ಆದೇಶದ ಪ್ರತಿಯನ್ನು ಅಧಿಕಾರಿಗಳು ಪರಿಶೀಲಿಸಿದ ನಂತರ ಇಂದು ಜೈಲಿನಿಂದ ಹೊರಬಂದ ಬೈರತಿ ಬಸವರಾಜ್ ಅವರನ್ನು ಸ್ವಾಗತಿಸಲು ಜೈಲಿನ ಗೇಟ್ ಬಳಿ ನೂರಾರು ಸಂಖ್ಯೆಯಲ್ಲಿ ಬೆಂಬಲಿಗರು ಮತ್ತು ಕಾರ್ಯಕರ್ತರು ಜಮಾಯಿಸಿದ್ದರು. ಶಾಸಕರು ಜೈಲಿನಿಂದ ಹೊರಬರುತ್ತಿದ್ದಂತೆ ಕಾರ್ಯಕರ್ತರು ಘೋಷಣೆಗಳನ್ನು ಕೂಗುವ ಮೂಲಕ ಹರ್ಷ ವ್ಯಕ್ತಪಡಿಸಿದರು. ಬಿಡುಗಡೆಯಾದ ಬಳಿಕ ಮಾಧ್ಯಮಗಳೊಂದಿಗೆ ಯಾವುದೇ ಪ್ರತಿಕ್ರಿಯೆ ನೀಡದ ಶಾಸಕರು, ಬೆಂಬಲಿಗರ ಸಮ್ಮುಖದಲ್ಲಿ ನೇರವಾಗಿ ತಮ್ಮ ಕಾರಿನಲ್ಲಿ ಸ್ಥಳದಿಂದ ನಿರ್ಗಮಿಸಿದರು.
ಮಾ.18ರಿಂದ SSLC ಪರೀಕ್ಷೆ-1 ಆರಂಭ: ಬೆಂಗಳೂರಿನ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ
BREAKING: ಷೇರು ಮಾರುಕಟ್ಟೆಯಲ್ಲಿ ರಕ್ತಪಾತ: ಒಂದೇ ದಿನದಲ್ಲಿ ಹೂಡಿಕೆದಾರರ ₹5.87 ಲಕ್ಷ ಕೋಟಿ ಭಸ್ಮ | Share Market








