ಬೆಂಗಳೂರು: ಮಹಿಳೆ ಕಿಡ್ನ್ಯಾಪ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದಂತ ಮಾಜಿ ಸಚಿವ ಹೆಚ್.ಡಿ ರೇವಣ್ಣಗೆ, ಕೋರ್ಟ್ ಇಂದು 7 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿತ್ತು. ಅವರನ್ನು ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಿಗೆ ಪೊಲೀಸರು ಶಿಫ್ಟ್ ಮಾಡಿದ್ದರು. ಈಗ ಕೇಂದ್ರ ಕಾರಾಗೃಹದಲ್ಲಿರುವಂತ ಮಾಜಿ ಸಚಿವ ಹೆಚ್.ಡಿ ರೇವಣ್ಣ ಖೈದಿ ನಂ.4567 ಆಗಿದ್ದಾರೆ.

ಸಂಸದ ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವೀಡಿಯೋದಲ್ಲಿ ಸಂತ್ರಸ್ತೆಯಾಗಿದ್ದಂತ ಮಹಿಳೆಯೊಬ್ಬರನ್ನು ಮಾಜಿ ಸಚಿವ ಹೆಚ್.ಡಿ ರೇವಣ್ಣ ಕಿಡ್ನ್ಯಾಪ್ ಮಾಡಿಸಿದ್ದಾರೆ ಎಂಬುದಾಗಿ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಅವರ ಮಗ ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ಹೆಚ್.ಡಿ ರೇವಣ್ಣ ವಿರುದ್ಧ ಅಪಹರಣ ಪ್ರಕರಣ ದಾಖಲಾಗಿತ್ತು. ಈ ಕೇಸ್ ನಲ್ಲಿ ಜಾಮೀನು ಅರ್ಜಿ ಸಲ್ಲಿಸಿದ್ರೂ, ಕೋರ್ಟ್ ವಜಾಗೊಳಿಸಿತ್ತು. ಹೀಗಾಗಿ ಎಸ್ಐಟಿ ಅಧಿಕಾರಿಗಳು ಅವರನ್ನು ಬಂಧಿಸಿದ್ದರು.

ಎಸ್ಐಟಿ ಅಧಿಕಾರಿಗಳು ಬಂಧನದ ಬಳಿಕ ಬೆಂಗಳೂರಿನ 17ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿ, ಇಂದಿನವರೆಗೆ ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ಪಡೆದಿದ್ದರು. ಇಂದು ಎಸ್ಐಟಿ ವಶಕ್ಕೆ ನೀಡಲಾಗಿದ್ದಂತ ಕಾಲಾವಧಿ ಅಂತ್ಯಗೊಂಡ ಹಿನ್ನಲೆಯಲ್ಲಿ ಮತ್ತೆ ಕೋರ್ಟ್ ಗೆ ಶಾಸಕ ಹೆಚ್.ಡಿ ರೇವಣ್ಣ ಅವರನ್ನು ಹಾಜರುಪಡಿಸಲಾಗಿತ್ತು.

ಬೆಂಗಳೂರಿನ 17ನೇ ಎಸಿಎಂಎಂ ಕೋರ್ಟ್ ಈ ಪ್ರಕರಣದ ವಿಚಾರಣೆ ನಡೆಸಿ, ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಮೇ.14ರವರೆಗೆ 7 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿತ್ತು. ಹೀಗಾಗಿ ಅವರನ್ನು ಪೊಲೀಸರು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಶಿಫ್ಟ್ ಮಾಡಿದ್ದರು. ಪರಪ್ಪನ ಅಗ್ರಹಾರ ಜೈಲು ಸೇರಿರುವಂತ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರಿಗೆ ಜೈಲು ಅಧಿಕಾರಿಗಳು ವಿಚಾರಾಣಾಧಿನ ಖೈದಿಗೆ ನೀಡುವಂತೆ ಖೈದಿ ನಂಬರ್ 4567 ಸಂಖ್ಯೆಯನ್ನು ನೀಡಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

ನಾಳೆ ಬೆಳಗ್ಗೆ 10.30ಕ್ಕೆ ‘SSLC’ ಫಲಿತಾಂಶ ಪ್ರಕಟ : ಈ ರೀತಿ ‘ರಿಸಲ್ಟ್’ ಚೆಕ್ ಮಾಡಿ | Karnataka SSLC Exam results 2024

ಕಾಂಗ್ರೆಸ್ ನ ‘ಗ್ಯಾರಂಟಿ ಯೋಜನೆಗಳೇ’ ನನ್ನ ಕೈ ಹಿಡಿಯುತ್ತವೆ : ಗೀತಾ ಶಿವರಾಜ್ ಕುಮಾರ ವಿಶ್ವಾಸ

Share.
Exit mobile version