ಶಿವಮೊಗ್ಗ: ರಾಜ್ಯಕ್ಕೆ ಭೀಕರ ಬರಗಾಲದ ಪರಿಸ್ಥಿತಿ ಎದುರಾದರೂ ಸಹ ಕೇಂದ್ರ ಬರಪರಿಹಾರವನ್ನು ಬಿಡುಗಡೆ ಮಾಡಲಿಲ್ಲ. ಕರ್ನಾಟಕದಲ್ಲಿ 48 ಲಕ್ಷ ಹೆಕ್ಟೇರ್ ಬೆಳೆ ನಾಶವಾಗಿ, 35 ಸಾವಿರ ಕೋಟಿ ನಷ್ಟವಾಗಿ ರೈತರು ಸಂಕಷ್ಟಕ್ಕೀಡಾಗಿದ್ದಾರೆ. ನಮ್ಮ ಸಂಪನ್ಮೂಲಗಳಿಂದ ತಲಾ ಎರಡು ಸಾವಿರದಂತೆ 34 ಲಕ್ಷ ರೈತರಿಗೆ ಪರಿಹಾರ ನೀಡಲಾಯಿತು. ಎನ್ ಡಿ ಆರ್ ಎಫ್ ಮಾರ್ಗಸೂಚಿಯಂತೆ ರಾಜ್ಯಕ್ಕೆ 18172 ಕೋಟಿ ರೂ.ಗಳ ಬರ ಪರಿಹಾರಕ್ಕೆ ಮನವಿ ಸಲ್ಲಿಸಲಾಗಿತ್ತು. ಎನ್ ಡಿ ಆರ್ ಎಫ್ ಪರಿಹಾರ ರಾಜ್ಯಕ್ಕೆ ನೀಡುವ ಭಿಕ್ಷೆಯಲ್ಲ, ಅದು ನಮ್ಮ ಹಕ್ಕು ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ.

ರಾಜ್ಯಕ್ಕಾದ ಅನ್ಯಾಯವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ನಲ್ಲಿ ನಡೆಸಿದ ಹೋರಾಟಕ್ಕೆ ಪ್ರತಿಯಾಗಿ ಕೇಂದ್ರ ಸರ್ಕಾರ ಕೇವಲ 3454 ಕೋಟಿ ರೂ.ಗಳನ್ನು ನೀಡಿ ಮತ್ತೆ ಮತ್ತೆ ದ್ರೋಹ ಮಾಡುತ್ತಲೇ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.‌

AICC ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು, AICC ಮಾಜಿ ಅಧ್ಯಕ್ಷರಾದ ರಾಹುಲ್ ಗಾಂಧಿ, ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್,AICC ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೇವಾಲ, ಸಚಿವ ಮಧು ಬಂಗಾರಪ್ಪ, ಶಾಸಕರಾದ ಗೋಪಾಲಕೃಷ್ಣ ಬೇಳೂರು, ಬಿ.ಕೆ.ಸಂಗಮೇಶ್, ವಿಧಾನ ಪರಿಷತ್ ಸದಸ್ಯರೂ ಪಕ್ಷದ ಕಾರ್ಯಾಧ್ಯಕ್ಣರೂ ಆದ ಮಂಜುನಾಥ್ ಭಂಡಾರಿ , ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನಕುಮಾರ್ ಸೇರಿ ಜಿಲ್ಲಾ ಮುಖಂಡರುಗಳು ಉಪಸ್ಥಿತರಿದ್ದರು.

Prajwal Revanna: ಪ್ರಜ್ವಲ್ ರೇವಣ್ಣ ವೀಡಿಯೋ ಬಿಡುಗಡೆಗೆ ಕ್ಷಣಗಣನೆ, 8AM: ಏ.8ರಂದೇ ‘ಫೇಸ್ ಬುಕ್’ನಲ್ಲಿ ‘ನವೀನ್ ಗೌಡ ಪೋಸ್ಟ್’

Prajwal Revanna: ಪ್ರಜ್ವಲ್ ರೇವಣ್ಣ ವೀಡಿಯೋ ಬಿಡುಗಡೆಗೆ ಕ್ಷಣಗಣನೆ, 8AM: ಏ.8ರಂದೇ ‘ಫೇಸ್ ಬುಕ್’ನಲ್ಲಿ ‘ನವೀನ್ ಗೌಡ ಪೋಸ್ಟ್’

Share.
Exit mobile version