ವರದಿ: ವಸಂತ ಬಿ ಈಶ್ವರಗೆರೆ

ಬೆಂಗಳೂರು: ಮಹಿಳೆಯೊಬ್ಬರ ಅಪಹರಣ ಪ್ರಕರಣದಲ್ಲಿ ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹೆಚ್.ಡಿ ರೇವಣ್ಣ ಸಲ್ಲಿಸಿದ್ದಂತ ನಿರೀಕ್ಷಣಾ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಹೀಗಾಗಿ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಇಂತಹ ಅವರನ್ನು ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಿದರು. ಅವರನ್ನು ಐದು ದಿನಗಳ ಕಾಲ ಎಸ್ಐಟಿ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.

ನಿನ್ನೆ ಮಹಿಳೆಯರೊಬ್ಬರ ಅಪಹರಣ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ವಜಾಗೊಂಡ ನಂತ್ರ ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ಎಸ್ಐಟಿ ಅಧಿಕಾರಿಗಳು ವಶಕ್ಕೆ ಪಡೆದಿದ್ದರು. ಆ ಬಳಿಕ ಬೌರಿಂಗ್ ಆಸ್ಪತ್ರೆಗೆ ಕರೆದೊಯ್ದು, ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿತ್ತು. ಇಂದು ಎಸ್ಐಟಿ ಅಧಿಕಾರಿಗಳು ಕೋರಮಂಗಲದಲ್ಲಿರುವಂತ ನ್ಯಾಯಾಧೀಶರಾದ ರವೀಂದ್ರ ಕಟ್ಟಿಮನಿ ಅವರ ಮುಂದೆ ಹಾಜರುಪಡಿಸಿದರು.

ಇದನ್ನೂ ಎಸ್ಐಟಿ ಅಧಿಕಾರಿಗಳು ಹೆಚ್.ಡಿ ರೇವಣ್ಣ ಅವರನ್ನು ವಿಚಾರಣೆಗೆ ಒಳಪಡಿಸಿದರು. ಆದ್ರೇ ಅವರು ಸಂತ್ರಸ್ತೆಯ ಕುರಿತು ಕೇಳಇದಂತೆ ಪ್ರಶ್ನೆಗಳಿಗೆ ನನಗೆ ಯಾವುದೇ ಮಾಹಿತಿ ಇಲ್ಲ. ನಮ್ಮ ಮನೆಯಲ್ಲಿ ಸಾಕಷ್ಟು ಜ ಕೆಲಸ ಮಾಡುತ್ತಿದ್ದಾರೆ. ಸಂತ್ರಸ್ತೆಯ ಮಗನ ಹೇಳಿಕೆಯನ್ನ ಹೇಗೆ ನಂಬಲು ಸಾಧ್ಯ. ನಾನೇ ಕರೆದುಕೊಂಡು ಬರಲು ಹೇಳಇದ್ದೇನೆೇದು ಸಾಕ್ಷಿ ಏನು ಸಂತ್ರಸ್ತೆ ಜೊತೆ ನಾನು ಮಾತನಾಡಿಲ್ಲ. ನೋಡಿಲ್ಲ ಎಂಬುದಾಗಿ ಹೇಳಿದ್ದಾರೆ ಎನ್ನಲಾಗಿದೆ.

ಇದಲ್ಲದೇ ರೇವಣ್ಣ ಎಂಬ ಹೆಸಿನವನು ನಾನೊಬ್ಬನೇ ಇಲ್ಲ. ಬೇರೆಯವರು ಇರಬಹುದಲ್ವ? ನನಗೆ ಏನೂ ಗೊತ್ತಿಲ್ಲ. ಕೇವಲ ಎಲ್ಲದಕ್ಕೂ ನನಗೆ ಏನೂ ಗೊತ್ತಿಲ್ಲ ಎಂಬುದಾಗಿ ಒಂದೇ ಉತ್ತರ ನೀಡಿರೋ ಮಾಹಿತಿ ತಿಳಿದು ಬಂದಿದೆ.

ಹೆಚ್.ಡಿ ರೇವಣ್ಣ ಅವರನ್ನು ಕೋರಮಂಗಲದಲ್ಲಿರುವಂತ ನ್ಯಾಯಾಧೀಶರ ನಿವಾಸಕ್ಕೆ ಎಸ್ಐಟಿ ಅಧಿಕಾರಿಗಳು ಕರೆದೊಯ್ಯುತ್ತಿದ್ದಂತೇ, ಅಲ್ಲದೇ ಹೆಚ್.ಡಿ ರೇವಣ್ಣ ಪರ ಹಿರಿಯ ವಕೀಲ ಮೂರ್ತಿ ಡಿ ನಾಯಕ್ ಕೂಡ ಆಗಮಿಸಿದರು.

ಬೌರಿಂಗ್ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಎಸ್ಐಟಿ ಅಧಿಕಾರಿಗಳು ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರನ್ನು ಒಳಪಡಿಸಿದ ನಂತ್ರ, ಅಲ್ಲಿಂದ ಕೋರಮಂಗಲದ ಎನ್ ಜಿವಿಯಲ್ಲಿರುವಂತ ನ್ಯಾಯಾಧೀಶರಾದ ರವೀಂದ್ರ ಕಟ್ಟೀಮನಿ ಅವರ ಮುಂದೆ ಹಾಜರುಪಡಿಸಿದರು. ಇದೇ ಸಂದರ್ಭದಲ್ಲಿ ನ್ಯಾಯಾಧೀಶರ ನಿವಾಸದ ಮುಂದೆ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿತ್ತು.

ಮಾಜಿ ಸಚಿವ ಹೆಚ್.ಡಿ ರೇವಣ್ಣ ಅವರ ವಿರುದ್ಧದ ಮಹಿಳೆ ಅಪಹರಣ ಪ್ರಕರಣದ ವಿಚಾರಣೆಯ ವೇಳೆಯಲ್ಲಿ ನ್ಯಾಯಾಧೀಶರ ಮುಂದೆ ಅವರು ಕಣ್ಣೀರಿಟ್ಟಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಅಂತಿಮವಾಗಿ ಪ್ರಕರಣದ ವಿಚಾರಣೆ ನಡೆಸಿದಂತ 17ನೇ ಎಸಿಎಂಎಂ ಕೋರ್ಟ್ ನ ನ್ಯಾಯಾಧೀಶರಾದ ರವೀಂದ್ರ ಕಟ್ಟಿಮನಿ ಅವರು, ವಾದ ಪ್ರತಿವಾದವನ್ನು ಆಲಿಸಿದ ನಂತ್ರ, ಎಸ್ಐಟಿ ಅಧಿಕಾರಿಗಳು ಹೆಚ್ಚಿನ ವಿಚಾರಣೆಗೆ ಕೋರಿಕೊಂಡ ಕಾರಣ, ಹೆಚ್.ಡಿ ರೇವಣ್ಣ ಅವರನ್ನು ಐದು ದಿನಗಳ ಕಾಲ ಎಸ್ಐಟಿ ಅಧಿಕಾರಿಗಳ ವಶಕ್ಕೆ ನೀಡಿ ಆದೇಶಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.

ಅಪಹರಣ ಪ್ರಕರಣ: ಎಸ್ಐಟಿ ವಿಚಾರಣೆ ವೇಳೆ ಹೆಚ್.ಡಿ ರೇವಣ್ಣ ಹೇಳಿದ್ದೇನು ಗೊತ್ತಾ?

ಅಪಹರಣ ಪ್ರಕರಣ: ಎಸ್ಐಟಿ ವಿಚಾರಣೆ ವೇಳೆ ಹೆಚ್.ಡಿ ರೇವಣ್ಣ ಹೇಳಿದ್ದೇನು ಗೊತ್ತಾ?

Share.
Exit mobile version