ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಹಾಗೂ ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿ(80) ಅವರು, ಇಂದು ಅನಾರೋಗ್ಯದಿಂದ ನಿಧನರಾಗಿದ್ದಾರೆ. ಈ ಮೂಲಕ ಹಿರಿಯ ರಾಜಕಾರಣಿಯೊಬ್ಬರು ಇನ್ನಿಲ್ಲವಾಗಿದ್ದಾರೆ.
ಅನಾರೋಗ್ಯದಿಂದ ಬಳಲುತ್ತಿದ್ದಂತ ಮಾಜಿ ಸಚಿವ ಜಬ್ಬಾರ್ ಖಾನ್ ಹೊನ್ನಳ್ಳಿಯವರು ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದ್ರೇ ಇಂದು ಮುಂಜಾಗನೆ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರೋದಾಗಿ ತಿಳಿದು ಬದಿದೆ.
BREAKING NEWS : SC,ST ಸಮುದಾಯದ ಮೀಸಲಾತಿ ಹೆಚ್ಚಳ : ಸಿಎಂ ‘ಬಸವರಾಜ ಬೊಮ್ಮಾಯಿ’ ಘೋಷಣೆ |Basavaraj Bommai
ಅಂದಹಾಗೇ ಜಬ್ಬಾರ್ ಖಾನ್ ಅವರು ಮಾಜಿ ಸಿಎಂ ಎಸ್ಎಂ ಕೃಷ್ಣ ಅವರ ಸರ್ಕಾರದಲ್ಲಿ ಯುವಜನ ಮತ್ತು ಕ್ರೀಡಾ ಇಲಾಖೆಯ ಸಚಿವರಾಗಿ ಕಾರ್ಯ ನಿರ್ವಹಿಸಿದ್ದರು. ಇಂತಹ ಹಿರಿಯ ರಾಜಕಾರಣಿ, ಮಾಜಿ ಸಚಿವರ ನಿಧನಕ್ಕೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.
ಹಿರಿಯ ರಾಜಕಾರಣಿ, ಮಾಜಿ ಸಚಿವರಾದ ಶ್ರೀ ಜಬ್ಬಾರ ಖಾನ್ ಹೊನ್ನಳ್ಳಿ ಅವರು ನಿಧನರಾದ ಸಂಗತಿ ತೀವ್ರ ದುಃಖ ಉಂಟು ಮಾಡಿದೆ. ಹಲವು ಬಗೆಯ ಸಮಾಜ ಸೇವೆಯಲ್ಲಿ ತೊಡಗಿದ್ದ ಅವರ ಅಗಲಿಕೆಯಿಂದ ನಾಡು ಒಬ್ಬ ಸಜ್ಜನ ರಾಜಕಾರಣಿಯನ್ನು ಕಳೆದುಕೊಂಡಂತಾಗಿದೆ. ದೇವರು ಅವರ ಆತ್ಮಕ್ಕೆ ಶಾಂತಿ ನೀಡಲಿ ಎಂದು ಪ್ರಾರ್ಥಿಸುತ್ತೇನೆ. ಓಂ ಶಾಂತಿ 🙏 pic.twitter.com/t13YsG1kVz
— Araga Jnanendra (@JnanendraAraga) October 7, 2022