ಹುಬ್ಬಳ್ಳಿ : ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಕೊಪ್ಪಳ ಜಿಲ್ಲೆಯ ಗಂಗಾವತಿ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸುವುದಾಗಿ ಮಾಜಿ ಸಚಿವ ಗಾಲಿ ಜನಾರ್ದನ ರೆಡ್ಡಿ ಘೋಷಿಸಿದ್ದಾರೆ.
BIGG NEWS : ಮೃತನ ವಿವಾಹೇತರ ಸಂಬಂಧದ ಮಕ್ಕಳಿಗೂ ಪರಿಹಾರದ ಹಕ್ಕಿದೆ : ಹೈಕೋರ್ಟ್ ಮಹತ್ವದ ಆದೇಶ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಳ್ಳಾರಿ ಜಿಲ್ಲೆಗೆ ಪ್ರವೇಶ ಇರದ ಹಿನ್ನೆಲೆಯಲ್ಲಿ ಗಂಗಾವತಿ ಸಮೀಪದದ ಕ್ಷೇತ್ರವಾಗಿದೆ. ಜೊತೆಗೆ ಆಂಜನೇಯನ ಪುಣ್ಯಭೂಮಿಯಾಗಿದ್ದು, ಅಲ್ಲಿಂದಲೇ ಸ್ಪರ್ಧಿಸುತ್ತೇನೆ. ನಾನು ಸಾರ್ವಜನಿಕ ಬದುಕಿಗೆ ಬರಬೇಕೆಂದು ತೀರ್ಮಾನ ಮಾಡಿದ್ದೇನೆ. ಡಿಸೆಂಬರ್ 25 ರಂದು ಬೆಂಗಳೂರಿನಲ್ಲಿ ಎಲ್ಲ ವಿಚಾರ ಹಂಚಿಕೊಳ್ಳುವೆ ಎಂದು ಹೇಳಿದ್ದಾರೆ.
BIGG NEWS : ಉಡುಪಿಯಲ್ಲಿ ಇದೇ ಮೊದಲ ಬಾರಿ ರಾಜ್ಯ ಸರ್ಕಾರದಿಂದ `ಯಕ್ಷಗಾನ ಸಮ್ಮೇಳನ’
ಇನ್ನು ಜನಾರ್ದನ ರೆಡ್ಡಿ ಅವರು,ಮತ್ತೆ ಬಿಜೆಪಿಗೆ ಕರೆತರುವ ಪ್ರಯತ್ನ ವಿಫಲವಾಗಿದೆ ಎನ್ನಲಾಗಿದ್ದು, ಸಚಿವ ಶ್ರೀರಾಮುಲು ಅವರನ್ನು ಗೆಳೆಯ ಜನಾರ್ದನ ರೆಡ್ಡಿ ಮನವೊಲಿಸಿ ಪಕ್ಷಕ್ಕೆ ಕರೆತರುವಂತೆ ರಾಜ್ಯ ಬಿಜೆಪಿ ನಾಯಕರ ಪ್ರಯತ್ನವೂ ವಿಫಲವಾಗಿದ್ದು, ಯಾವುದೇ ಕಾರಣಕ್ಕೂ ಬಿಜೆಪಿಗೆ ಹೋಗದೇ ಸ್ವಂತ ಪಕ್ಷ ಕಟ್ಟಿ ಚುನಾವಣೆ ಎದುರಿಸಲು ಜನಾರ್ದನ ರೆಡ್ಡಿ ಸಜ್ಜಾಗಿದ್ದಾರೆ ಎಂದು ಹೇಳಲಾಗುತ್ತಿದೆ.
ಜನಾರ್ದನ ರೆಡ್ಡಿ ತಮ್ಮ ಆಪ್ತರ ಮೂಲಕ ಹೊಸ ಪಕ್ಷ ನೋಂದಣಿ ಕಾರ್ಯದಲ್ಲಿ ತೊಡಗಿದ್ದರಂತೆ. ತಮ್ಮ ನೂತನ ಪಾರ್ಟಿಗೆ ಕಲ್ಯಾಣ ಕರ್ನಾಟಕ ಪಕ್ಷ ಎಂದು ಹೆಸರಿಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಗಂಗಾವತಿಯಿಂದ ತಾವೇ ಸ್ಪರ್ಧೆ ಮಾಡಿ, ಉತ್ತರ ಕರ್ನಾಟಕದ ಮೂವತ್ತಕ್ಕೂ ಅಧಿಕ ಕ್ಷೇತ್ರಗಳಲ್ಲಿ ತಮ್ಮ ಪಕ್ಷದ ಅಭ್ಯರ್ಥಿಗಳನ್ನು ಚುನಾವಣೆ ಕಣಕ್ಕೆ ಇಳಿಸಲು ಜನಾರ್ದನರೆಡ್ಡಿ ನಿರ್ಧರಿಸಿದ್ದಾರೆ ಎನ್ನಲಾಗಿದೆ.