ಬೆಂಗಳೂರು: ಗುತ್ತಿಗೆದಾರ ಸಂತೋಷ್ ಪಾಟೀಲ್ ( Contractor Santhosh Patil Suicide Case ), ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ( Farmer Minister KS Eshwarappa ) ಅವರ ವಿರುದ್ಧ ಗುತ್ತಿಗೆಯಲ್ಲಿ ಕಮೀಷನ್ ಆರೋಪ ಮಾಡಿ, ಆತ್ಮಹತ್ಯೆಗೆ ಶರಣಾಗಿದ್ದರು. ಈ ಪ್ರಕರಣದಲ್ಲಿ ಸಚಿವ ಸ್ಥಾನಕ್ಕೆ ಕೆ.ಎಸ್ ಈಶ್ವರಪ್ಪ ರಾಜೀನಾಮೆ ಕೂಡ ನೀಡಿದ್ದರು. ಇದೀಗ ಈ ಪ್ರಕರಣದಲ್ಲಿ ಪೊಲೀಸರು ನ್ಯಾಯಾಲಯಕ್ಕೆ ಅಂತಿಮ ವರದಿಯನ್ನು ಸಲ್ಲಿಸಿದ್ದಾರೆ. ಈ ವರದಿಯಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪಗೆ ಕ್ಲೀನ್ ಚೀಟ್ ನೀಡಲಾಗಿದೆ ಎನ್ನಲಾಗುತ್ತಿದೆ.
‘ಒಕ್ಕಲಿಗ ಸಮುದಾಯದ ಅಭಿವೃದ್ಧಿ ನಿಗಮ’ದಿಂದ ವಿವಿಧ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ
ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಉಡುಪಿ ಪೊಲೀಸರು ಅಂತಿಮ ವರದಿಯನ್ನು ಸಲ್ಲಿಸಿದ್ದಾರೆ. ಈ ಪ್ರಕರಣ ಸಂಬಂಧ ಆತ್ಮಹತ್ಯೆಗೂ ಮುನ್ನಾ ಗುತ್ತಿಗೆದಾರ ಸಂತೋಷ್ ಪಾಟೀಲ್, ಈಶ್ವರಪ್ಪ ವಿರುದ್ಧ ಕಮೀಷನರ್ ಆರೋಪ ಮಾಡಿದ್ದರು. ಈ ನಿಟ್ಟಿನಲ್ಲಿಯೂ ಉಡುಪಿ ಪೊಲೀಸರು ತನಿಖೆ ನಡೆಸಿ, ಈಶ್ವರಪ್ಪ ಅವರನ್ನು ವಿಚಾರಣೆಗೆ ಒಳಪಡಿಸಬೇಕಿತ್ತು.
BIGG NEWS: ನಾಳೆ ‘ಬೆಂಗಳೂರಿನ ಅರ್ಧ ಭಾಗ’ದಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut
ಆದ್ರೇ.. ಮಾಜಿ ಸಚಿವ ಈಶ್ವರಪ್ಪ ಅವರನ್ನು ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣದಲ್ಲಿ ಆತ್ಮಹತ್ಯೆಗೆ ಕುಮ್ಮಕ್ಕು ನೀಡುವಂತ ಸಾಕ್ಷ್ಯಾಧಾರಗಳೇ ಇಲ್ಲ ಎಂಬುದಾಗಿ ಉಲ್ಲೇಖಿಸಿ, ಅವರನ್ನು ವಿಚಾರಣೆಗೂ ಒಳಪಡಿಸದೇ ನ್ಯಾಯಾಲಯಕ್ಕೆ ಅಂತಿಮ ವರದಿಯನ್ನು ಸಲ್ಲಿದ್ದಾರೆ ಎನ್ನಲಾಗಿದೆ. ಈ ಮೂಲಕ ಮಾಜಿ ಸಚಿವ ಕೆ ಎಸ್ ಈಶ್ವರಪ್ಪಗೆ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಕ್ಲೀನ್ ಚಿಟ್ ನೀಡಲಾಗಿದೆ ಎಂದು ಹೇಳಲಾಗುತ್ತಿದೆ.
BREAKING NEWS : ಖ್ಯಾತ ಟಾಲಿವುಡ್ ನಟ ‘ಪವನ್ ಕಲ್ಯಾಣ್’ ಆರೋಗ್ಯದಲ್ಲಿ ಏರುಪೇರು ; ಅಭಿಮಾನಿಗಳಲ್ಲಿ ಆತಂಕ