ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದಲ್ಲಿ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಸಂಕಷ್ಟ ಶುರುವಾಗಿದೆ. ಮೂರು ತಿಂಗಳಲ್ಲಿ ಪ್ರಕರಣದ ಬಗ್ಗೆ ತನಿಖೆ ನಡೆಸಿ, ವರದಿ ಸಲ್ಲಿಸುವಂತೆ ಲೋಕಾಯುಕ್ತ ಪೊಲೀಸರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಆದೇಶಿಸಿದೆ.
ಇಂದು ಈ ಸಂಬಂಧ ಬಿ.ವಿನೋದ್ ಎಂಬುವರು ಸಲ್ಲಿಸಿದ್ದಂತ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿಚಾರಣೆ ನಡೆಸಿತು. ಆದಾಯ ಮೀರಿ ಆಸ್ತಿ ಗಳಿಕೆ ಸಂಬಂಧ ಲೋಕಾಯುಕ್ತ ಪೊಲೀಸರು ಮೂರು ತಿಂಗಳಲ್ಲಿ ತನಿಖೆ ನಡೆಸಿ ವರದಿಯನ್ನು ಸಲ್ಲಿಸುವಂತೆ ಆದೇಶಿಸಿದೆ.
ಅಂದಹಾಗೇ 2016ರಲ್ಲಿ ಕೆ.ಎಸ್ ಈಶ್ವರಪ್ಪ ಅವರು ಜಲಸಂಪನ್ಮೂಲ ಸಚಿವರಾಗಿದ್ದಂತ ಸಂದರ್ಭದಲ್ಲಿ ಬಿ.ವಿನೋದ್ ಎಂಬುವರು ಲೋಕಾಯುಕ್ತಕ್ಕೆ ಆದಾಯ ಮೀರಿ ಆಸ್ತಿಗಳಿಕೆ ಸಂಬಂಧ ಖಾಸಗಿ ದೂರು ಸಲ್ಲಿಸಿದ್ದರು. ಈ ದೂರನ್ನು ಲೋಕಾಯುಕ್ತ ನ್ಯಾಯಾಲಯವು ವಜಾಗೊಳಿಸಿತ್ತು. ಈ ವಜಾ ಆದೇಶ ಪ್ರಶ್ನಿಸಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಇಂದು ಅರ್ಜಿಯ ವಿಚಾರಣೆ ನಡೆಸಿದಂತ ಕೋರ್ಟ್, ಈ ಆದೇಶ ಮಾಡಿದೆ. ಈ ಮೂಲಕ ಮಾಜಿ ಸಚಿವ ಕೆ.ಎಸ್ ಈಶ್ವರಪ್ಪಗೆ ಬಿಗ್ ಶಾಕ್ ನೀಡಿದೆ.
ಕರ್ನಾಟಕದ ‘ನಾಲ್ವರು ಮಾಜಿ ಸಿಎಂ’ಗಳು ಓಡಾಡಿದ ಕಾರನ್ನು 2.10 ಲಕ್ಷಕ್ಕೆ ಖರೀದಿಸಿದ ‘ಕಾಂಗ್ರೆಸ್ ನಾಯಕ’
ಏ. 15 ರಿಂದ `ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಹಾಗೂ ಸಾಂಸ್ಕೃತಿ ಸ್ಪರ್ಧೆ’ : ಆನ್‍ಲೈನ್‍ನಲ್ಲಿ ನೊಂದಣಿಗೆ ಸೂಚನೆ