ವಿಜಯಪುರ : ಲೋಕಸಭೆ ಚುನಾವಣೆಯಲ್ಲಿ ಟಿಕೆಟ್ ನೀಡದ ಹಿನ್ನೆಲೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ, ಬಿಜೆಪಿಯ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಬಿಜೆಪಿ ಪಕ್ಷಕ್ಕೆ ಮರು ಸೇರ್ಪಡೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು ರಾಜ್ಯ ಬಿಜೆಪಿಯಲ್ಲಿ ಪಕ್ಷ ಶುದ್ಧೀಕರಣ ಆಗಬೇಕಿದೆ ಎಂದು ತಿಳಿಸಿದರು.
ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯಲ್ಲಿರುವ ಕೆಲಗೊಂದಲಗಳು ಬಗೆಹರಿಯಬೇಕು. ರಾಜ್ಯ ಬಿಜೆಪಿಯಲ್ಲಿ ಸ್ವಲ್ಪ ಶುದ್ಧೀಕರಣ ಆಗಬೇಕು. ವರಿಷ್ಠರು ರಾಜ್ಯ ನಾಯಕರು ಆರ್ ಎಸ್ ಎಸ್ ನವರು ಗಮನಿಸಬೇಕು.ಈ ಕಾರಣದಿಂದ ನಾನು ಎಂಪಿ ಚುನಾವಣೆಗೆ ಸ್ಪರ್ಧೆ ಮಾಡಿದ್ದೆ ಆದರೆ ಸುಮ್ಮನೆ ಹೋಗುವುದಲ್ಲ ಏನಾಗಬೇಕೆಂಬುದನ್ನು ಕುಳಿತು ಚರ್ಚಿಸುತ್ತೇನೆ ಎಂದರು.
ಇನ್ನೂ ಯಡಿಯೂರಪ್ಪ ಕುಟುಂಬದ ವಿರುದ್ಧ ಈಶ್ವರಪ್ಪ ವಾಗ್ದಾಳಿ ನಡೆಸಿದ್ದು, ವಿಜಯಪುರದಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ. ಯಡಿಯೂರಪ್ಪ ಕೇಂದ್ರ ಚುನಾವಣ ಸಮಿತಿಯ ಸದಸ್ಯರು. ಬಿಎಸ್ ಯಡಿಯೂರಪ್ಪನವರ ಪುತ್ರ ರಾಘವೇಂದ್ರ ಸಂಸದ. ಮತ್ತೊಬ್ಬ ಮಗ ವಿಜಯೇಂದ್ರ ಶಾಸಕ, ಬಿಜೆಪಿ ರಾಜ್ಯಾಧ್ಯಕ್ಷ ಆಗಿದ್ದಾರೆ.
ಮೋದಿ ಕುಟುಂಬ ಮುಕ್ತ ರಾಜಕಾರಣ ಮಾಡುತ್ತೇನೆ ಎಂದು ಹೇಳುತ್ತಾರೆ. ಹಾಗಾದರೆ ರಾಜ್ಯ ಬಿಜೆಪಿ ಕೇಂದ್ರದ ಹಿಡಿತದಲ್ಲಿ ಇದೆಯಾ ಇಂತಹ ವಿಷಯ ಚರ್ಚೆ ಮಾಡಿ ಬಳಿಕ ಬಿಜೆಪಿ ಸೇರ್ಪಡೆಯಾಗಬೇಕು ಎಂದು ವಿಜಯಪುರದಲ್ಲಿ ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ಹೇಳಿಕೆ ನೀಡಿದರು