ಬೆಂಗಳೂರು: ರಾಜ್ಯ ಸರ್ಕಾರದಿಂದ ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಮಾಜಿ ಸಚಿವ ಎಂ.ಎಸ್ ಆತ್ಮಾನಂದ ಅವರನ್ನು ನೇಮಕ ಮಾಡಿ ಆದೇಶಿಸಿದೆ.
ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಎಂ.ಎಸ್.ಆತ್ಮಾನಂದ, ಮಾಜಿ ಸಚಿವರು, ನಂ.2074, ಶಿವಲೀಲಾ, 1ನೇ ಅಡ್ಡರಸ್ತೆ, ಸುಭಾಷ್ ನಗರ, ಮಂಡ್ಯ ಇವರನ್ನು The Companies Act, 2013 Schedule-I ರಡಿ ರಚಿಸಿರುವ ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತದ Articles of Associationರ ಕಂಡಿಕ-28(i) ರನ್ಮಯ ತಕ್ಷಣದಿಂದ ಜಾರಿಗೆ ಬರುವಂತೆ ಎರಡು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆ ಕರ್ನಾಟಕ ಒಕ್ಕಲಿಗ ಸಮುದಾಯಗಳ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರನ್ನಾಗಿ ನೇಮಿಸಿ ಆದೇಶಿಸಿದೆ ಎಂದು ತಿಳಿಸಿದೆ.