ಬೆಂಗಳೂರು: ಲೋಕಸಭಾ ಚುನಾವಣೆಯ ಹೊತ್ತಿನಲ್ಲಿ ಮಾಜಿ ಸಚಿವ ಆರ್.ಶಂಕರ್ ಅವರು ಬಿಜೆಪಿ ಪಕ್ಷವನ್ನು ತೊರೆದು, ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವ ಹೆಚ್.ಕೆ ಪಾಟೀಲ್ ಸೇರಿದಂತೆ ವಿವಿಧ ಕಾಂಗ್ರೆಸ್ ಮುಖಂಡರ ಸಮ್ಮುಖದಲ್ಲಿ ಕಮಲ ಬಿಟ್ಟು, ಕೈ ಹಿಡಿದರು.
ಈ ಕುರಿತು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಡಿಸಿಎಂ ಡಿ.ಕೆ ಶಿವಕುಮಾರ್ ಅವರು, ರಾಣೇಬೆನ್ನೂರಿನ ಮಾಜಿ ಶಾಸಕರಾದ ಶ್ರೀ ಆರ್. ಶಂಕರ್ ಅವರು ಇಂದು ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ತೊರೆದು ನಮ್ಮ ಪಕ್ಷದ ತತ್ವ ಸಿದ್ಧಾಂತಗಳ ಮೇಲೆ ನಂಬಿಕೆ ಇಟ್ಟು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು. ಅವರನ್ನು ಆತ್ಮೀಯವಾಗಿ ಸ್ವಾಗತಿಸಿ, ಮುಂದಿನ ರಾಜಕೀಯ ಜೀವನ ಉಜ್ವಲವಾಗಿರಲಿ ಎಂದು ಶುಭ ಹಾರೈಸಿದೆ ಎಂದಿದ್ದಾರೆ.
ಹೆಚ್ಚುತ್ತಿದೆ ಕಾಂಗ್ರೆಸ್ ಶಕ್ತಿ, ನಮ್ಮ ಕನಸು ರಾಜ್ಯದ ಪ್ರಗತಿ ಎಂದು ತಿಳಿಸಿದ್ದಾರೆ.
ರಾಣೇಬೆನ್ನೂರಿನ ಮಾಜಿ ಶಾಸಕರಾದ ಶ್ರೀ ಆರ್. ಶಂಕರ್ ಅವರು ಇಂದು ತಮ್ಮ ಬೆಂಬಲಿಗರೊಂದಿಗೆ ಬಿಜೆಪಿ ತೊರೆದು ನಮ್ಮ ಪಕ್ಷದ ತತ್ವ ಸಿದ್ಧಾಂತಗಳ ಮೇಲೆ ನಂಬಿಕೆ ಇಟ್ಟು ಕೆಪಿಸಿಸಿ ಕಚೇರಿಯಲ್ಲಿ ಕಾಂಗ್ರೆಸ್ ಸೇರ್ಪಡೆಗೊಂಡರು. ಅವರನ್ನು ಆತ್ಮೀಯವಾಗಿ ಸ್ವಾಗತಿಸಿ, ಮುಂದಿನ ರಾಜಕೀಯ ಜೀವನ ಉಜ್ವಲವಾಗಿರಲಿ ಎಂದು ಶುಭ ಹಾರೈಸಿದೆ.
ಹೆಚ್ಚುತ್ತಿದೆ… pic.twitter.com/Es53pi7Nd7
— DK Shivakumar (@DKShivakumar) April 5, 2024
ರಾಜ್ಯದ ಎಲ್ಲ 28 ಕ್ಷೇತ್ರಗಳಲ್ಲಿ ‘ಮೋದಿ ಮತ್ತೊಮ್ಮೆ’ ವಾತಾವರಣ: ಬಿವೈ ವಿಜಯೇಂದ್ರ ಅಭಿಪ್ರಾಯ