ಬೆಂಗಳೂರು: ಬಿಜೆಪಿ ಪಕ್ಷಕ್ಕೆ ಮಾಜಿ ಶಾಸಕ ಎಟಿ ರಾಮಸ್ವಾಮಿ ಅವರು ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಬಿಜೆಪಿ ಪಕ್ಷದಿಂದ ಹೊರನಡೆದು, ಗುಡ್ ಬೈ ಹೇಳಿದ್ದಾರೆ.
ತಮ್ಮ ರಾಜೀನಾಮೆ ಪತ್ರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ. ತಾನು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ರಾಜಕೀಯದಿಂದ ದೂರ ತೆರಳಿ ಪರಿಸರ ಚಟುವಟಿಕೆಯಲ್ಲಿ ಭಾಗಿಯಾಗುವುದಾಗಿ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ಅಂದಹಾಗೇ ಕಳೆದ ವಿಧಾನಸಭಾ ಚುನಾವಣೆ ವೇಳೆಯಲ್ಲಿ ಜೆಡಿಎಸ್ ಪಕ್ಷವನ್ನು ತೊರೆದು ಬಿಜೆಪಿಯನ್ನು ರಾಮಸ್ವಾಮಿ ಸೇರ್ಪಡೆಯಾಗಿದ್ದರು. ಬಿಜೆಪಿ-ಜೆಡಿಎಸ್ ಮೈತ್ರಿಯ ನಂತ್ರ ಬಿಜೆಪಿಯ ಎಲ್ಲಾ ಚಟುವಟಿಕೆಯಿಂದ ದೂರವೇ ಉಳಿದಿದ್ದರು.
ಇದೀಗ ಮಾಜಿ ಶಾಸಕ ಎ.ಟಿ ರಾಮಸ್ವಾಮಿ ಅವರು ತಾನು ಪರಿಸರ ಚಟುವಟಿಕೆಯಲ್ಲಿ ತೊಡಗಿಕೊಳ್ಳುವ ನಿಟ್ಟಿನಲ್ಲಿ ಸಕ್ರೀಯವಾಗುತ್ತಿದ್ದೇನೆ. ಹೀಗಾಗಿ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿಸಿದ್ದೇನೆ ಅಂತ ತಿಳಿಸಿದ್ದಾರೆ.
GOOD NEWS: ರಾಜ್ಯದ 16,500 ಸರ್ಕಾರಿ ಶಾಲೆಗಳಿಗೆ ಹೊಸ ಪಾತ್ರೆಗಳು: ಸ್ಮಾರ್ಟ್ ಕ್ಲಾಸ್, ಉಚಿತ ವಿದ್ಯುತ್ ಸೌಲಭ್ಯ
SHOCKING : ಪತ್ನಿಯ ಪ್ರಿಯಕರನ ‘ಜನನಾಂಗ’ ಕತ್ತರಿಸಿ ಠಾಣೆಗೆ ತಂದ ಪತಿ : ಬೆಚ್ಚಿಬಿದ್ದ ಪೊಲೀಸ್ ಅಧಿಕಾರಿಗಳು!