ಕಲಬುರಗಿ : ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ವಿದೇಶಾಂಗ ಸಚಿವರು, ಪಕ್ಷದ ಹಿರಿಯ ನಾಯಕ ಹಾಗೂ ಎಸ್.ಎಂ.ಕೃಷ್ಣ ಅವರ ಅಗಲಿಕೆಗೆ ಮಾಜಿ ಶಾಸಕ ರಾಜಕುಮಾರ ಪಟೀಲ್ ತೇಲ್ಕೂರ ಸಂತಾಪ ವ್ಯಕ್ತಪಡಿಸಿದ್ದರು.
ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ”ಎಸ್.ಎಂ.ಕೃಷ್ಣ ಅವರು ನಮ್ಮನ್ನ ಅಗಲಿದ ಸುದ್ದಿ ಅತ್ಯಂತ ದುಖಃ ತಂದಿದೆ. ಹಿರಿಯ ಚೇತನಕ್ಕೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ಎಸ್.ಎಂ. ಕೃಷ್ಣ ಅವರು ರಾಷ್ಟ್ರ ಹಾಗೂ ರಾಜ್ಯದ ಅಭಿವೃದ್ಧಿಗೆ ಸಾಕಷ್ಟು ಶ್ರಮಪಟ್ಟಿದ್ದಾರೆ. ಬಿಜೆಪಿಗೆ ಸೇರ್ಪಡೆಗೊಂಡ ಬಳಿಕ ಪ್ರೀತಿಯಿಂದ ನಮ್ಮ ಪಕ್ಷಕ್ಕೆ ಸಾಕಷ್ಟು ಸಲಹೆಗಳನ್ನ ನೀಡುತ್ತಿದ್ದರು. ಎಸ್.ಎಂ. ಕೃಷ್ಣ ಅವರು ರಾಷ್ಟ್ರ ಹಾಗೂ ರಾಜ್ಯದ ಅಭಿವೃದ್ಧಿಗೆ ಸಾಕಷ್ಟು ಶ್ರಮಪಟ್ಟಿದ್ದಾರೆ.
ರಾಜ್ಯದ ಮುಖ್ಯಮಂತ್ರಿಯಾಗಿ ಅವರು ಜನ ಮಾನಸದಲ್ಲಿ ಉಳಿಯುವಂತಹ ಕೆಲಸವನ್ನು ಮಾಡಿದ್ದಾರೆ. ಬೆಂಗಳೂರನ್ನು ಸಿಂಗಾಪೂರ ಮಾಡಬೇಕೆಂಬ ಕನಸನ್ನು ಕಂಡವರು. ಬೆಂಗಳೂರನ್ನು ಐಟಿ ಬಿಟಿ ಸಿಟಿಯನ್ನಾಗಿ ಮಾಡಿದರು. ಕೇಂದ್ರದಲ್ಲಿ ಅನೇಕ ಹುದ್ದೆಗಳನ್ನು ಅಲಂಕರಿಸಿದ್ದರು. ಅವರು ಸಜ್ಜನ ರಾಜಕಾರಣಿಯಾಗಿದ್ದರು. ಸೌಮ್ಯ ಸ್ವಾಭವದ ರಾಜಕಾರಣಿಯನ್ನು ಕಳೆದುಕೊಂಡು ರಾಜ್ಯ ಬಡವಾಗಿದೆ ಎಂದರು.