ಗದಗ: ನಿನ್ನೆ ಬೆಂಗಳೂರಿನ ವರ್ತೂರು ಬಳಿಯಲ್ಲಿ ನಡೆಯುತ್ತಿದ್ದಂತ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಭಾಗಿಯಾಗಿದ್ದಂತ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರ ಅವರು ಹೃದಯಾಘಾತದಿಂದ ನಿಧನರಾಗಿದ್ದರು. ಅವರ ಅಂತ್ಯಕ್ರಿಯೆಯನ್ನು ಹುಟ್ಟೂರಿನಲ್ಲಿ ಇಂದು ನೆರವೇರಿಸಲಾಯಿತು. ಈ ಮೂಲಕ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರ ಅವರು ಮಣ್ಣಲ್ಲಿ ಮಣ್ಣಾಗಿದ್ದಾರೆ.
ರಾಜ್ಯದ ಎಲ್ಲಾ ಗ್ರಾಮ ಪಂಚಾಯ್ತಿಗಳಿಗೆ ಸಂವಿಧಾನದ ಪ್ರತಿ ಹಂಚಿಕೆ – ಸಿಎಂ ಬೊಮ್ಮಾಯಿ
ಗದಗ-ರೋಣದಿಂದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದಂತ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರ(60) ನಿನ್ನೆ ಪಕ್ಷದಿಂದ ನಡೆಸಲಾಗಿದ್ದಂತ ಬೆಂಗಳೂರಿನ ಸಭೆಯಲ್ಲಿ ಭಾಗಿಯಾಗಿದ್ದರು. ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ವರ್ತೂರು ಬಳಿಯಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳ ಸಭೆ ನಿನ್ನೆ ನಡೆಸಲಾಗುತ್ತಿತ್ತು.
ಸರ್ ರೈತರ ಸಾಲಮನ್ನಾ ಮಾಡುವಿರಾ.? ಏಯ್ ನೆಕ್ಸ್ಟ್ ಪ್ರಶ್ನೆ ಕೇಳಪ್ಪ: ಸಿಎಂ ಬೊಮ್ಮಾಯಿ ಉತ್ತರ
ಈ ಸಭೆಯಲ್ಲಿ ಭಾಗಿಯಾಗಿದ್ದಂತ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರ ಅವರು ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದರು. ಕೂಡಲೇ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದ್ರೇ ಚಿಕಿತ್ಸೆ ಫಲಿಸದೇ ನಿಧನರಾಗಿದ್ದರು. ಇಂತಹ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ಗದಗ ಜಿಲ್ಲೆಯ ರೋಣ ತಾಲೂಕಿನ ಸೂಡಿ ಗ್ರಾಮದಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ನೆರವೇರಿಸಲಾಯಿತು.