ಬೆಂಗಳೂರು: ನಗರದ ವರ್ತೂರು ಬಳಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಹಾಗೂ ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳ ಸಭೆಯನ್ನು ಕರೆಯಲಾಗಿತ್ತು. ಈ ಸಭೆಯಲ್ಲಿಯೇ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಅವರು ಹೃದಯಾಘಾತಕ್ಕೆ ಒಳಗಾಗಿ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಹೀಗಾಗಿ ಇಂದಿನ ಸಭೆಯನ್ನು ಮುಂದೂಡಿಕೆ ಮಾಡಲಾಗಿದೆ.
ಇಂದು ಬೆಂಗಳೂರಿನ ವರ್ತೂರು ಬಳಿಯಲ್ಲಿ ಮುಂಬರುವತ ಕರ್ನಾಟಕ ವಿಧಾನಸಭಾ ಚುನಾವಣೆಗಾಗಿ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳ ಸಭೆಯನ್ನು ಕೆಪಿಸಿಸಿಯಿಂದ ಕರೆಯಲಾಗಿತ್ತು. ರಣದೀಪ್ ಸುರ್ಜೇವಾಲ, ಡಿಕೆ ಶಿವಕುಮಾರ್ ನೇತೃತ್ವದ ಈ ಸಭೆಯಲ್ಲಿ ಅನೇಕ ಕಾಂಗ್ರೆಸ್ ನಾಯಕರು ಭಾಗಿಯಾಗಿದ್ದರು. ಅಲ್ಲದೇ ಟಿಕೆಟ್ ಆಕಾಂಕ್ಷಿಗಳು ಕೂಡ ಹಾಜರಿದ್ದರು.
SHOCKING NEWS: ಮಗುವಿಗೆ ನಾಲಿಗೆ ಬದಲಿಗೆ ಜನನಾಂಗಕ್ಕೆ ಶಸ್ತ್ರಚಿಕಿತ್ಸೆ ಮಾಡಿದ ವೈದ್ಯರು
ಈ ಸಭೆಯಲ್ಲಿ ಗದಗ, ರೋಣ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದಂತ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು(60) ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದರು. ಅವರನ್ನು ಕೂಡಲೇ ಸಮೀಪದ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಯಿತು. ಆದ್ರೇ ತೀವ್ರ ಹೃದಯಾಘಾತಕ್ಕೆ ಒಳಗಾಗಿದ್ದಂತ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಇಂತಹ ಮಾಜಿ ಶಾಸಕರ ನಿಧನಕ್ಕೆ ಡಿಕೆ ಶಿವಕುಮಾರ್, ರಣದೀಪ್ ಸುರ್ಜೇವಾಲ ಸಂತಾಪ ಸೂಚಿಸಿದ್ದಾರೆ.
ಇನ್ನೂ ಇಂದು ನಡೆಯುತ್ತಿದ್ದಂತ ಕಾಂಗ್ರೆಸ್ ಪಕ್ಷದ ಟಿಕೆಟ್ ಆಕಾಂಕ್ಷಿಗಳ ಸಭೆಯಲ್ಲಿ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ನಿಧನದಿಂದಾಗಿ ಮುಂದೂಡಿಕೆ ಮಾಡಲಾಗಿದೆ. ನವೆಂಬರ್ 27ಕ್ಕೆ ನಿಗದಿ ಮಾಡಲಾಗಿದ್ದು, ಜೂಮ್ ಮೀಟಿಂಗ್ ಮೂಲಕ ಸಭೆಯನ್ನು ನಡೆಸೋದಕ್ಕೆ ಕಾಂಗ್ರೆಸ್ ಪಕ್ಷವು ನಿರ್ಧರಿಸಿದೆ.