ಗದಗ: ಹೃದಯಾಘಾತದಿಂದ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು(60) ಅವರು ಇಂದು ನಿಧನರಾಗಿರೋದಾಗಿ ತಿಳಿದು ಬಂದಿದೆ.
ಹೃದಯಾಘಾತದಿಂದ ಕುಸಿದು ಬಿದ್ದಿದ್ದಂತ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಅವರನ್ನು ಕೂಡಲೇ ಕುಟುಂಬಸ್ಥರು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದ್ರೇ ಚಿಕಿತ್ಸೆ ಫಲಿಸದೇ ಅವರು ಇಂದು ನಿಧನರಾಗಿರೋದಾಗಿ ತಿಳಿದು ಬಂದಿದೆ.
ಅಂದಹಾಗೇ 2019ರಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಂತ ಅವರು, ಗದಗ, ರೋಣ ಕ್ಷೇತ್ರದ ಶಾಸಕರಾಗಿದ್ದರು. ಇಂತಹ ಅವರು ಇಂದು ಹೃದಯಾಘಾತದಿಂದ ನಿಧನರಾಗುವ ಮೂಲಕ ಇನ್ನಿಲ್ಲವಾಗಿದ್ದಾರೆ.
ರೋಣ ಕ್ಷೇತ್ರದ ಶಾಸಕರಾಗಿದ್ದ ಶ್ರೀಶೈಲಪ್ಪ ಬಿದರೂರು ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರು ಸಂತಾಪ ಸೂಚಿಸಿದ್ದಾರೆ.