ಉತ್ತರ ಕನ್ನಡ: ಜಿಲ್ಲೆಯಲ್ಲಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿ ಸಂಭವಿಸಿದಂತ ಭೀಕರ ಅಪಘಾತದಲ್ಲಿ ಮಾಜಿ ಶಾಸಕ ವಿ.ಎಸ್ ಪಾಟೀವ್ ಅವರು ಕೂದಲೆಳೆಯ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅಲ್ಲದೇ ಸಣ್ಣಪುಟ್ಟ ಗಾಯವಾಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಾಜಿ ಶಾಸಕ ವಿ.ಎಸ್ ಪಾಟೀಲ್ ಅವರು ತಮ್ಮ ಸ್ವಗ್ರಾಮ ಅಂದಲಗಿಗೆ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡು ತಾಲೂಕಿನ ಹಾವಳ್ಳಿ ಬಳಿಯಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು, ಅಪಘಾತ ಉಂಟಾಗಿದೆ.
ಈ ಅಪಘಾತದಲ್ಲಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾದ ನಂತ್ರ ಕೂಡಲೇ ಕಾರಿನಲ್ಲಿದ್ದಂತ ಏರ್ ಬ್ಯಾಗ್ ಓಪನ್ ಆದ ಪರಿಣಾಮ ಮಾಜಿ ಶಾಸಕ ವಿ.ಎಸ್ ಪಾಟೀಲ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸಣ್ಣಪುಟ್ಟ ಗಾಯವಾಗಿದ್ದು, ಸಮೀಪದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ. ಯಾವುದೇ ಹೆಚ್ಚಿನ ಗಂಭೀರ ಗಾಯವಾಗಿಲ್ಲ ಎಂಬುದಾಗಿ ತಿಳಿದು ಬಂದಿದೆ.
ಅಂದಹಾಗೇ ಈ ಅಪಘಾತದಲ್ಲಿ ಚಾಲಕನ ಕಣ್ಣಿಗೆ ಗಾಯವಾಗಿದ್ದರೇ, ಮಾಜಿ ಶಾಸಕ ವಿಎಸ್ ಪಾಟೀಲ್ ಅವರ ಎದೆಗೆ ಪೆಟ್ಟು ಬಿದ್ದಿದೆ ಎನ್ನಲಾಗುತ್ತಿದೆ.
ಬೆಂಗಳೂರಲ್ಲಿ ‘ನೀರಿನ ಬಿಕ್ಕಟ್ಟು’: ನಿವಾರಣೆಗೆ ‘ವಾರ್ಡ್ ವಾರು ನೋಡಲ್ ಅಧಿಕಾರಿ’ ನೇಮಕ – BBMP ಆದೇಶ
BREAKING:ರಾಷ್ಟ್ರಪತಿಗಳಿಂದ ರಾಜ್ಯಸಭೆಗೆ ‘ಸುಧಾಮೂರ್ತಿ’ ನಾಮನಿರ್ದೇಶನ