ನವದೆಹಲಿ : ಲೋಕಸಭೆ ಚುನಾವಣೆಹೊಸ್ತಿಲಿನಲ್ಲಿ ರಾಜ್ಯ ರಾಜಕಾರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಇತ್ತೀಚಿಗೆ ಬಿಜೆಪಿ ವಿಧಾನ ಪರಿಷತ್ ಸದಸ್ಯೆ ತೇಜಸ್ವಿನಿ ಗೌಡ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು ಇದೀಗ ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ.
ಹೌದು ಇತ್ತೀಚಿಗೆ ವಿಧಾನ್ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದು, ಸ್ವ ಇಚ್ಛೆಯಿಂದ ರಾಜೀನಾಮೆ ನೀಡಿರುವುದಾಗಿ ಉಲ್ಲೇಖಿಸಿದ್ದಾರೆ. ತೇಜಸ್ವಿನಿ ಗೌಡ ಅವರ ಪರಿಷತ್ ಸದಸ್ಯ ಸ್ಥಾನದ ಅವಧಿ ಜೂನ್ 24ರ ವರೆಗೆ ಇತ್ತು ಎನ್ನಲಾಗುತ್ತಿದೆ.
ಇದೀಗ ನವದೆಹಲಿಯಲ್ಲಿರುವ ಕಾಂಗ್ರೆಸ್ ಕಚೇರಿಯಲ್ಲಿ ಮಾಜಿ ಎಂಎಲ್ಸಿ ತೇಜಸ್ವಿನಿ ಗೌಡ ಅವರು ಪಕ್ಷದ ನಾಯಕರಾದ ಜಯರಾಮ್ ರಮೇಶ್ ಹಾಗೂ ಪವನ್ ಕೆರ ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡರು.