ತುಮಕೂರು : ಕಾಂಗ್ರೆಸ್ ಗೆ ರಾಜೀನಾಮೆ ನೀಡಿರುವ ಮಾಜಿ ಸಂಸದ ಎಸ್ ಪಿ ಮುದ್ದ ಹನುಮೇಗೌಡ ಇಂದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ.

ಬೆಂಗಳೂರಿನ ಬಿಜೆಪಿ ಕಚೇರಿ ಮಲ್ಲೇಶ್ವರಂನಲ್ಲಿ ಇಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಎಸ್ ಪಿ ಮುದ್ದ ಹನುಮೇಗೌಡ ಅಧಿಕೃತವಾಗಿ ಬಿಜೆಪಿಗೆ ಸೇರಲಿದ್ದಾರೆ. ಬಳಿಕ 2024 ರ ಲೋಕಸಭಾ ಚುನಾವಣೆ ಅಭ್ಯರ್ಥಿಯಾಗಿ ತುಮಕೂರು ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎನ್ನಲಾಗಿದೆ.

ಮೊದಲು ಕಾಂಗ್ರೆಸ್ ನಲ್ಲಿದ್ದ ಮುದ್ದ ಹನುಮೇಗೌಡ ನಂತರ ಜೆಡಿಎಸ್ ಸೇರಿದ್ದರು. ನಂತರ ಮತ್ತೆ ಕಾಂಗ್ರೆಸ್ ಗೆ ಮರಳಿದ್ದರು, ತುಮಕೂರು ಲೋಕಸಭಾ ಕ್ಷೇತ್ರವನ್ನು ಕಾಂಗ್ರೆಸ್, ಜೆಡಿಎಸ್ ಗೆ ಬಿಟ್ಟು ಕೊಟ್ಟಿದ್ದರಿಂದ ತುಮಕೂರು ಸಂಸದರಾಗಿದ್ದ ಮುದ್ದ ಹನುಮೇಗೌಡ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡಿರಲಿಲ್ಲ. ನಂತರ ಕಾಂಗ್ರೆಸ್ ಗೆ ರಾಜೀನಾಮೆ ನೀಡಿರುವ ಮಾಜಿ ಸಂಸದ ಎಸ್ ಪಿ ಮುದ್ದ ಹನುಮೇಗೌಡ ಇಂದು ಬಿಜೆಪಿ ಸೇರ್ಪಡೆಯಾಗಲಿದ್ದಾರೆ.

BIGG NEWS : ರಾಜ್ಯದ ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

BIG NEWS: ಮೊದಲ ಬಾರಿಗೆ CRPFನ ಇಬ್ಬರು ಮಹಿಳಾ ಅಧಿಕಾರಿಗಳಿಗೆ ಅರೆಸೇನಾ ಪಡೆಯಲ್ಲಿ IG ಹುದ್ದೆಗೆ ಬಡ್ತಿ

BIGG NEWS : ರಾಜ್ಯದ ಪ್ರಾಥಮಿಕ, ಪ್ರೌಢ ಶಾಲಾ ಶಿಕ್ಷಕರಿಗೆ ಇಲ್ಲಿದೆ ಮಹತ್ವದ ಮಾಹಿತಿ

BREAKING NEWS : IPL ; ‘ಪಂಜಾಬ್ ಕಿಂಗ್ಸ್’ ತಂಡದ ನೂತನ ನಾಯಕರಾಗಿ ‘ಶಿಖರ್ ಧವನ್’ ನೇಮಕ ; ಫ್ರಾಂಚೈಸಿ ಘೋಷಣೆ

 

Share.
Exit mobile version