ಬೆಂಗಳೂರು: ಮಾಜಿ ಸಂಸದ ಮುದ್ದಹನುಮೇಗೌಡ ಹಾಗೂ ನಟ ಶಶಿಕುಮಾರ್ ಅವರು ಇಂದು ಬೆಂಗಳೂರಿನ ಮಲ್ಲೇಶ್ವರಂ ಕಚೇರಿಯಲ್ಲಿ ಬಿಜೆಪಿ ಸೇರ್ಪಡೆಯಾದರು.
ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ರಾಜ್ಯಾಧ್ಯಕ್ಷ ಕುಮಾರ್ ಕಟೀಲ್ ಇಬ್ಬರನ್ನೂ ಪಕ್ಷಕ್ಕೆ ಸೇರ್ಪಡೆ ಆಗಿದ್ದಾರೆ. ಕಟೀಲ್ ಮತ್ತು ಸಿಎಂ ಮಾಜಿ ಸಂಸದರಾದ ಶಶಿಕುಮಾರ್ ಹಾಗೂ ಮುದ್ದಹನುಮೇಗೌಡರಿಗೆ ಪಕ್ಷದ ಶಾಲು ಹಾಕಿ, ಪಕ್ಷದ ಬಾವುಟ ನೀಡಿ ಬರಮಾಡಿಕೊಂಡರು. ಈ ವೇಳೆ ಕೆಪಿಸಿಸಿ ಸದಸ್ಯರಾಗಿದ್ದ ವೆಂಕಟಾಚಲ, ಮಾಜಿ ಐಎಎಸ್ ಅಧಿಕಾರಿ ಅನಿಲ್ ಕುಮಾರ್, ಮೈಸೂರಿನ ರಮೇಶ್ ಮುನಿಯಪ್ಪ ಬಿಜೆಪಿ ಸೇರ್ಪಡೆ ಆದರು. ರಮೇಶ್ ಮುನಿಯಪ್ಪ ಮಾಜಿ ಸಿಎಂ ಶೀಲಾ ದಿಕ್ಷೀತ್ರಿಗೆ ವಿಶೇಷ ಕರ್ತವ್ಯಾಧಿಕಾರಿ ಆಗಿದ್ದರು.