ಬೆಂಗಳೂರು: ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಬಿಗ್ ಶಾಕ್ ನೀಡಲಾಗಿದೆ.
ಹಾಸನದ ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಮಾಜಿ ಸಂಸದ ಪ್ರಜ್ವರ್ ರೇವಣ್ಣ ವಿರುದ್ಧ ಅತ್ಯಾಚಾರ ಕೇಸ್ ದಾಖಲಾಗಿತ್ತು. ಈ ಪ್ರಕರಣದಲ್ಲಿ ಜಾಮೀನು ಕೋರಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಪ್ರಜ್ವಲ್ ರೇವಣ್ಣ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿ ವಜಾಗೊಳಿಸಿದೆ. ಹೀಗಾಗಿ ಕಳೆದ 14 ತಿಂಗಳಿನಿಂದ ಜೈಲಿನಲ್ಲಿರುವಂತ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಮತ್ತೊಂದು ಬಿಗ್ ಶಾಕ್ ನೀಡಿದಂತೆ ಆಗಿದೆ.
CRIME NEWS: ಅಕ್ಕನ ಜೊತೆಗೆ ಅಕ್ರಮ ಸಂಬಂಧ: ತಲೆಯ ಮೇಲೆ ಕಲ್ಲು ಎತ್ತಿಹಾಕಿ ವ್ಯಕ್ತಿ ಹತ್ಯೆಗೈದ ತಮ್ಮ