ಬೆಂಗಳೂರು: ಲೈಂಗಿಕ ದೌರ್ಜನ್ಯ, ಅಶ್ಲೀಲ ವೀಡಿಯೋ ಕೇಸ್, ಸಂತ್ರಸ್ತೆ ಕಿಡ್ನ್ಯಾಪ್ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಬಂಧಿಸಲಾಗಿತ್ತು. ಎಸ್ಐಟಿ ಕಸ್ಟಡಿಗೆ ಕೋರ್ಟ್ ನೀಡಿತ್ತು. ಇಂದು ಎಸ್ಐಟಿ ಕಸ್ಟಡಿ ಅಂತ್ಯಗೊಂಡ ಕಾರಣ, ಅವರನ್ನು ಕೋರ್ಟ್ ಮುಂದೆ ಹಾಜರುಪಡಿಸಲಾಗಿತ್ತು. ಅವರಿಗೆ ನ್ಯಾಯಾಲಯವು ಜುಲೈ.8ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.
ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಎಸ್ಐಟಿ ಕಸ್ಟಡಿಯಲ್ಲಿದ್ದಂತ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅವಧಿ ಅಂತ್ಯಗೊಂಡ ಹಿನ್ನಲೆಯಲ್ಲಿ ಹಾಜರುಪಡಿಸಲಾಗಿತ್ತು. ಈ ಪ್ರಕರಣದ ವಿಚಾರಣೆ ನಡೆಸಿದಂತೆ ನ್ಯಾಯಪೀಠವು, ಜುಲೈ.8ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.
ಮತ್ತೊಂದೆಡೆ ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಸಹೋದರ ಸೂರಜ್ ರೇವಣ್ಣ ಕೂಡ ಬಂಧನವಾಗಿದೆ. ಅವರನ್ನು ಜುಲೈ.1ರವರೆಗೆ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಸಿಐಡಿ ಕಸ್ಟಡಿಗೆ ನೀಡಿ ಆದೇಶಿಸಿದೆ. ಹೀಗಾಗಿ ಅಣ್ಣ ಪರಪ್ಪನ ಅಗ್ರಹಾರ ಜೈಲು ಪಾಲಾದ್ರೇ, ತಮ್ಮ ಸೂರಜ್ ರೇವಣ್ಣ ಸಿಐಡಿ ಕಸ್ಟಡಿಯಾಗಿದೆ.
BIG NEWS : ವಿಜಯಪುರ, ಧಾರವಾಡ ಜಿಲ್ಲೆಗಳಲ್ಲಿ ʻಫುಡ್ ಪಾರ್ಕ್ʼ ಸ್ಥಾಪಿಸುವಂತೆ ʻನಿಸ್ಸಿನ್ ಸಂಸ್ಥೆʼಗೆ ಆಹ್ವಾನ