ಬೆಂಗಳೂರು: ಇಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕೆ ಆರ್ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಮನೆಗೆಲಸದಾಕೆ ಮೇಲಿನ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಇಂತಹ ತೀರ್ಪಿಗೆ ಪ್ರತಿಕ್ರಿಯಿಸಿರುವಂತ ನಟಿ ರಮ್ಯಾ ಅವರು ಕಾನೂನು ಎಲ್ಲರಿಗೂ ಒಂದೇ ಎಂದಿದ್ದಾರೆ.
ಮೈಸೂರಿನ ಕೆ ಆರ್ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಅತ್ಯಾಚಾರ ಪ್ರಕರಣ ಸಂಬಂಧ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಜೀವಾವಧಿ ಶಿಕ್ಷೆಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿಧಿಸಿದೆ. ಅಲ್ಲದೇ 10 ಲಕ್ಷ ದಂಡವನ್ನು ಕೂಡ ವಿಧಿಸಿದೆ.
ಯಾವ ಸೆಕ್ಷನ್ ಅಡಿ ಏನು ಶಿಕ್ಷೆ? ದಂಡ ಗೊತ್ತಾ?
- ಐಪಿಸಿ ಸೆಕ್ಷನ್ 376(2)(ಕೆ) ರಡಿ ಜೀವಾವಧಿ ಶಿಕ್ಷೆ ಹಾಗೂ 5 ಲಕ್ಷ ದಂಡ
- 376(2)(ಎನ್) ಪದೇ ಪದೇ ಅತ್ಯಾಚಾರ ಪ್ರಕರಣದಲ್ಲಿ ಜೀವನ ಪರ್ಯಂತ ಜೈಲು, 5 ಲಕ್ಷ ದಂಡ
- ಐಪಿಸಿ ಸೆಕ್ಷನ್ 354(ಎ) ಅಡಿಯಲ್ಲಿ 3 ವರ್ಷ ಸೆರೆವಾಸ, 25,000 ದಂಡ
- ಐಪಿಸಿ ಸೆಕ್ಷನ್ 354(ಬಿ) ಅಡಿಯಲ್ಲಿ 7 ವರ್ಷ ಸೆರೆವಾಸ, 50,000 ದಂಡ
- ಐಪಿಸಿ ಸೆಕ್ಷನ್ 354(ಸಿ) ಅಡಿಯಲ್ಲಿ 3 ವರ್ಷ ಸೆರೆವಾಸ 25,000 ದಂಡ
- ಐಪಿಸಿ ಸೆಕ್ಷನ್ 506ರಡಿಯಲ್ಲಿ 2 ವರ್ಷ ಸೆರೆವಾಸ, 10,000 ದಂಡ
- ಐಪಿಸಿ ಸೆಕ್ಷನ್ 201ರಡಿಯಲ್ಲಿ 3 ವರ್ಷ ಸೆರೆವಾಸ, 25,000 ದಂಡ
- ಐಟಿ ಕಾಯ್ದೆ ಸೆಕ್ಷನ್ 66(ಇ) ಅಡಿಯಲ್ಲಿ 3 ವರ್ಷ ಸೆರೆವಾಸ, 25,000 ದಂಡ ವಿಧಿಸಲಾಗಿದೆ.
ಒಟ್ಟಾರೆಯಾಗಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಕೆ ಆರ್ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದಂತ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಯನ್ನು ವಿಧಿಸಲಾಗಿದೆ. ಅಲ್ಲದೇ 10 ಲಕ್ಷ ದಂಡವನ್ನು ವಿಧಿಸಿ ಗರಿಷ್ಠ ಶಿಕ್ಷೆಯನ್ನು ಕೋರ್ಟ್ ನೀಡಿದೆ.
ಈ ತೀರ್ಪಿನ ಕುರಿತಂತೆ ಎಕ್ಸ್ ನಲ್ಲಿ ಟ್ವಿಟ್ ಮಾಡಿರುವಂತ ಸ್ಯಾಂಡಲ್ ವುಡ್ ನಟಿ ರಮ್ಯಾ ಅವರು, ಕಾನೂನು ಎಲ್ಲರಿಗೂ ಒಂದೇ. ಮಹಿಳೆಯರ ಮೇಲಿನ ಅಪರಾಧಗಳಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು ಎಂದಿದ್ದಾರೆ.
Law is the same for all. Crimes against women will get the harshest punishment https://t.co/1HuGbbqWP0
— Ramya/Divya Spandana (@divyaspandana) August 2, 2025
BIG NEWS: ಸಾಗರ ತಾಯಿ ಮಕ್ಕಳ ಆಸ್ಪತ್ರೆ ‘ಜನರೇಟರ್ ಕಳ್ಳತನ’ ಕೇಸ್: ಆರೋಗ್ಯ ಇಲಾಖೆ ‘ಕಚೇರಿ ಅಧೀಕ್ಷಕ’ನೇ ಸಾಥ್
GOOD NEWS: ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ 24×7 ಆರೋಗ್ಯ ಸೇವೆಗೆ ಕ್ರಮ: ಸಚಿವ ದಿನೇಶ್ ಗುಂಡೂರಾವ್