ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ನಾಳೆ ಮಹತ್ವದ ದಿನವಾಗಿದೆ. ಕೆ.ಆರ್ ನಗರ ಮಹಿಳೆಯ ಅತ್ಯಾಚಾರ ಪ್ರಕರಣದ ಸಂಬಂಧ ನಾಳೆ ತೀರ್ಪನ್ನು ಕೋರ್ಟ್ ಪ್ರಕಟಿಸಲಿದೆ.
ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಪ್ರಕರಣದಲ್ಲಿ ಜೈಲು ಪಾಲಾಗಿದ್ದಾರೆ. ಅವರು ಜಾಮೀನು ಕೋರಿ ಸಲ್ಲಿಸಲಾಗಿದ್ದಂತ ಅರ್ಜಿಯನ್ನು ಕೋರ್ಟ್ ವಜಾಗೊಳಿಸಿ ಜೈಲೇ ಗತಿ ಎನ್ನುವಂತೆ ಆಗಿತ್ತು.
ಈ ನಡುವೆ ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಕೆ.ಆರ್ ನಗರ ಮಹಿಳೆಯ ಅತ್ಯಾಚಾರ ಪ್ರಕರಣದ ವಾದ ಪ್ರತಿ ವಾದವನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ನಡೆಸಿತ್ತು. ಇದೀಗ ಈ ಪ್ರಕರಣದಲ್ಲಿ ಕಾಯ್ದಿರಿಸಿದ್ದಂತ ತೀರ್ಪನ್ನು ನಾಳೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಪ್ರಕಟಿಸಲಿದೆ.
ಯಾವುದೇ ಹುದ್ದೆಯ ಆಕಾಂಕ್ಷಿ ನಾನಲ್ಲ, ಜನಸೇವೆಯೇ ನನ್ನ ಧ್ಯೇಯ: ಶಾಸಕ ಕೆ.ಎಂ.ಉದಯ್
ಇಂದಿನ ಮೈಸೂರು ಸಚಿವರು, ಶಾಸಕರ ಜೊತೆಗಿನ ಸಿಎಂ ಸಿದ್ಧರಾಮಯ್ಯ ಸಭೆಯ ಪ್ರಮುಖ ಹೈಲೈಟ್ಸ್