ಬೆಂಗಳೂರು: ಚಿಕ್ಕಬಳ್ಳಾಪುರ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದಿಂದ ರಕ್ಷಾ ರಾಮಯ್ಯ ಅವರಿಗೆ ಟಿಕೆಟ್ ನೀಡಲಾಗಿತ್ತು. ಅವರು ನಾಮಪತ್ರ ಸಲ್ಲಿಸಿ, ಚುನಾವಣಾ ಪ್ರಚಾರದಲ್ಲೂ ತೊಡಗಿದ್ದಾರೆ. ಈ ವೇಳೆಯಲ್ಲೇ ಮಾಜಿ ಸಂಸದ ವೀರಪ್ಪ ಮೊಯ್ಲಿ ಅವರು ರಾಜಕೀಯ ನಿವೃತ್ತಿಯನ್ನು ಘೋಷಿಸಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನನ್ನನ್ನು ಕಾಂಗ್ರೆಸ್ ಹೈಕಮಾಂಡ್ ಲೋಕಸಭಾ ಚುನಾವಣೆಯ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಮನವಿ ಮಾಡಿತ್ತು. ಹೈಕಮಾಂಡಿಗೆ ಗೌರವ ಕೊಟ್ಟು ಸ್ಪರ್ಧೆಯಿಂದ ಹಿಂದೆ ಸರಿದಿದ್ದೇನೆ ಎಂದರು.
ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆಯಲ್ಲಿ ನನ್ನ ಬೆಂಬಲಿಗರು ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯ ಅವರಿಗೆ ಬೆಂಬಲಿಸುವಂತೆ ಮನವಿ ಮಾಡಿದರು.
ನಾನು ಚುನಾವಣಾ ರಾಜಕೀಯದಿಂದ ಹಿಂದೆ ಸರಿಯುತ್ತಿದ್ದೇನೆ. ಚಿಕ್ಕಬಳ್ಳಾಪುರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ರಕ್ಷಾ ರಾಮಯ್ಯಗೆ ಬೆಂಬಲ ಸೂಚಿಸುತ್ತಿದ್ದೇನೆ ಎಂಬುದಾಗಿ ಹೇಳುವ ಮೂಲಕ ರಾಜಕೀಯ ನಿವೃತ್ತಿಯನ್ನು ಚಿಕ್ಕಬಳ್ಳಾಪುರದ ಮಾಜಿ ಸಂಸದ ವೀರಪ್ಪ ಮೊಯ್ಲಿ ಘೋಷಣೆ ಮಾಡಿದರು.
BREAKING NEWS : 5, 8, 9, 11ನೇ ತರಗತಿ ‘ಬೋರ್ಡ್ ಪರೀಕ್ಷೆ : ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆಯಾಜ್ಞೆ !