ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದಂತ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರು ( JDS National President ) ಯಾರಾಗಲಿದ್ದಾರೆ ಎನ್ನುವುದಕ್ಕೆ ತೆರೆ ಬಿದ್ದಿದೆ. ಇಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ( Farmer Prime Minister HD Devegowdha ) ಪುನರಾಯ್ಕೆಯಾಗಿದ್ದಾರೆ.
ಈ ಸಂಬಂಧ ಇಂದು ಬೆಂಗಳೂರಿನ ಜೆಡಿಎಸ್ ಕಚೇರಿ ಜೆಪಿ ಭವನದಲ್ಲಿ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ 13 ರಾಜ್ಯಗಳ ವಿವಿಧ ಜೆಡಿಎಸ್ ಮುಖಂಡರು ಭಾಗಿಯಾಗಿದ್ದರು.
ಸಚಿವ ಸುನೀಲ್ ಕುಮಾರ್ ಅವರೇ ತಮ್ಮ ಇಲಾಖೆಯ ಈ ಅವ್ಯವಸ್ಥೆ ಗಮನಿಸುವುದಿಲ್ಲವೇ.? – ಕಾಂಗ್ರೆಸ್
ಇಂದಿನ ಸಭೆಯಲ್ಲಿ ಜೆಡಿಎಸ್ ಪಕ್ಷವನ್ನು ಮುಂಬರುವಂತ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಲವರ್ಧನೆ ಸೇರಿದಂತೆ ವಿವಿಧ ವಿಷಯಗಳ ಚರ್ಚೆ ಕೂಡ ನಡೆಯಿತು.
ಈ ಬಳಿಕ ಜೆಡಿಎಸ್ ರಾಷ್ಟ್ರೀ ಅಧ್ಯಕ್ಷರಾಗಿ ಹೆಚ್ ಡಿ ದೇವೇಗೌಡ ಅವರನ್ನು ಒಮ್ಮತದಿಂದ ಪುನರಾಯ್ಕೆ ಮಾಡಲಾಗಿದೆ. ಈ ಮೂಲಕ ಮತ್ತೊಂದು ಅವಧಿಗೆ ಮಾಜಿ ಪಿಎಂ ಹೆಚ್ ಡಿ ದೇವೇಗೌಡ ಅವರನ್ನು ಆಯ್ಕೆ ಮಾಡಲಾಗಿದೆ.
BIG BREAKING NEWS: ಭಾರತ ಸೇರಿದಂತೆ ಜಾಗತಿಕವಾಗಿ Instagram ಡೌನ್: ಬಳಕೆದಾರ ಪರದಾಟ | Instagram Down
ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಪುನರಾಯ್ಕೆ ಆದ ಬಳಿಕ ಮಾತನಾಡಿದಂತ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು, ನನ್ನನ್ನು ಪುನರಾಯ್ಕೆ ಮಾಡಿದ ಎಲ್ಲರಿಗೂ ಧನ್ಯವಾದಗಳು. ನಾವು ಈಗ ಎರಡು ರಾಷ್ಟ್ರೀಯ ಪಕ್ಷಗಳ ವಿರುದ್ಧ ಹೋರಾಡಬೇಕಿದೆ. ಕೇರಳ ರಾಜ್ಯ ಸೇರಿದಂತೆ ಎಲ್ಲಾ ರಾಜ್ಯಗಳಲ್ಲಿಯೂ ಪಕ್ಷ ಬಲಪಡಿಸಲು ಒತ್ತು ನೀಡಲಾಗುತ್ತದೆ. ನಾಳೆ ಜೆಡಿಎಸ್ ಕೋರ್ ಕಮಿಟಿ ಸಭೆಯಲ್ಲಿ ಈ ವಿಚಾರ ಪ್ರಸ್ತಾಪ ಮಾಡುತ್ತೇವೆ ಎಂದರು.