ಹಾಸನ: ಮಾಜಿ ಸಚಿವ ಹೆಚ್.ಡಿ ರೇವಣ್ಣ, ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಕೇಸ್ ಬೆನ್ನಲ್ಲೇ, ಈಗ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರ ಕುಟುಂಬಕ್ಕೆ ಮತ್ತೊಂದು ಶಾಕ್ ನೀಡಲಾಗಿದೆ. ಅದೇ ವಿಧಾನ ಪರಿಷತ್ ಸದಸ್ಯ ಡಾ.ಸೂರತ್ ರೇವಣ್ಣ ವಿರುದ್ಧ ಜೆಡಿಎಸ್ ಕಾರ್ಯಕರ್ತನೊಬ್ಬ ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದಾರೆ.
ಈ ಕುರಿತಂತೆ ಸಂತ್ರಸ್ತರೊಬ್ಬರು ಸಿಎಂ ಸಿದ್ಧರಾಮಯ್ಯ, ಗೃಹ ಸಚಿವ ಡಾ.ಜಿ ಪರಮೇಶ್ವರ್, ಡಿಜಿ ಮತ್ತು ಐಜಿಪಿ ಹಾಗೂ ಹಾಸನ ಎಸ್ಪಿಗೆ ದೂರು ನೀಡಿದ್ದಾರೆ. ಅದರಲ್ಲಿ ಜೂನ್.16ರಂದು ಸೂರಜ್ ರೇವಣ್ಣ ಅವರು ತಮ್ಮ ಪಕ್ಷದ ಕಾರ್ಯಕರ್ತನನ್ನು ಸಹಾಯ ಮಾಡುವುದಾಗಿ ಚನ್ನಪಟ್ಟಣ ತಾಲೂಕಿನ ಗನ್ನಿಕಡದ ತೋಟದ ಮನೆಗೆ ಕರೆಯಿಸಿಕೊಂಡು, ಬಲವಂತವಾಗಿ ಅಸಹಜ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆ ಎಂಬುದಾಗಿ ಹೇಳಿದ್ದಾರೆ.
ಜೆಡಿಎಸ್ ಕಾರ್ಯಕರ್ತರೊಬ್ಬರು ಸಲ್ಲಿಸಿದಂತ ದೂರಿನ ಹಿನ್ನಲೆಯಲ್ಲಿ ಎಂಎಲ್ಸಿ ಸೂರಜ್ ರೇವಣ್ಣ ವಿರುದ್ಧ ಪ್ರಕರಣ ದಾಖಲಾಗಿದೆ ಎನ್ನಲಾಗುತ್ತಿದೆ. ಹೀಗಾಗಿ ಹೆಚ್.ಡಿ ರೇವಣ್ಣ, ಪ್ರಜ್ವಲ್ ರೇವಣ್ಣ ನಂತ್ರ ಈಗ ಸೂರಜ್ ರೇವಣ್ಣ ಅವರಿಗೆ ಸಂಕಷ್ಟ ಎದುರಾಗಿದೆ.
BREAKING : ‘ಹಜ್ ಯಾತ್ರೆ’ ವೇಳೆ 68 ಅಲ್ಲ, 98 ಭಾರತೀಯರು ಸಾವು : ವಿದೇಶಾಂಗ ಸಚಿವಾಲಯ ಮಾಹಿತಿ
ನಿಮ್ಮ ಮೂಲ ವೇತನ 12,000 ರೂ.ಗಳಾಗಿದ್ರೆ, ನಿವೃತ್ತಿಯ ನಂತ್ರ ಎಷ್ಟು ಲಕ್ಷ ‘PF’ ಬರುತ್ತೆ ಗೊತ್ತಾ.?