ಬೆಂಗಳೂರು: ಅನಾರೋಗ್ಯದ ಕಾರಣದಿಂದಾಗಿ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಕಳೆದ ನಾಲ್ಕು ದಿನಗಳ ಹಿಂದೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರು ದಾಖಲಾಗಿದ್ದರು. ಇಂತಹ ಅವರು ಗುಣಮುಖರಾದ ಕಾರಣ, ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಫೆಬ್ರವರಿ.15ರಂದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌ ಅವರಿಗೆ ಉಸಿರಾಟದ ಸಮಸ್ಯೆ ಎದುರಾಗಿ ಆರೋಗ್ಯದಲ್ಲಿ ಏರುಪೇರಾಗಿತ್ತು. ಕೂಡಲೇ ಅವರನ್ನು ಬೆಂಗಳೂರಿಮ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.
ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರನ್ನು ತಪಾಸಣೆಗೆ ಒಳಪಡಿಸಿದ್ದಂತ ವೈದ್ಯರು, ಚಿಕಿತ್ಸೆಯನ್ನು ನೀಡಿದ್ದರು. ಇಂದು ಅವರು ಗುಣಮುಖರಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿರೋದಾಗಿ ತಿಳಿದು ಬಂದಿದೆ.