ನವದೆಹಲಿ: ಮಾಜಿ ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಅವರ ಆರೋಗ್ಯದಲ್ಲಿ ದಿಢೀರ್ ಏರುಪೇರಾಗಿದ್ದು, ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಿರುವುದಾಗಿ ತಿಳಿದು ಬಂದಿದೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರನ್ನು ದೆಹಲಿಯ ಏಮ್ಸ್ ಗೆ ದಾಖಲಿಸಲಾಗಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಆರೋಗ್ಯ ಹದಗೆಟ್ಟಿದ್ದರಿಂದ ಗುರುವಾರ ಸಂಜೆ ದೆಹಲಿಯ ಏಮ್ಸ್ ಗೆ ದಾಖಲಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
92 ವರ್ಷದ ಸಿಂಗ್ ಅವರನ್ನು ಆಸ್ಪತ್ರೆಯ ತುರ್ತು ವಿಭಾಗದಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಅವರನ್ನು ಆಸ್ಪತ್ರೆಗೆ ದಾಖಲಿಸಲು ಕಾರಣ ತಕ್ಷಣಕ್ಕೆ ತಿಳಿದುಬಂದಿಲ್ಲ.
Former prime minister Manmohan Singh admitted to emergency dept of AIIMS Delhi: Sources. pic.twitter.com/ZHcxS3RN2a
— Press Trust of India (@PTI_News) December 26, 2024
ಬೆಂಗಳೂರು ಜನತೆ ಗಮನಕ್ಕೆ: ನಾಳೆ ಬೆಳಿಗ್ಗೆ 10 ರಿಂದ 3ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ | Power Cut
BREAKING : ಉದ್ಯೋಗಿಗಳಿಗೆ ಬಿಗ್ ರಿಲೀಫ್ ; ‘UAN’ ಜೊತೆಗೆ ‘ಆಧಾರ್’ ಲಿಂಕ್ ಗಡುವು ವಿಸ್ತರಣೆ |UAN-Aadhaar linking