ನವದೆಹಲಿ: ಗುರುವಾರ ನಿಧನರಾದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಅಂತ್ಯಕ್ರಿಯೆ ಇಂದು ದೆಹಲಿಯ ನಿಗಮ್ಬೋಧ್ ಘಾಟ್ ಚಿತಾಗಾರದಲ್ಲಿ ಸರ್ಕಾರಿ ಗೌರವಗಳೊಂದಿಗೆ ನಡೆಯಲಿದೆ
ಅಂತ್ಯಕ್ರಿಯೆಯನ್ನು ಬೆಳಿಗ್ಗೆ 11:45 ಕ್ಕೆ ನಿಗದಿಪಡಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವಾಲಯ ಶುಕ್ರವಾರ ಪ್ರಕಟಿಸಿದೆ.
ಸಿಂಗ್ ಅವರ ಪಾರ್ಥಿವ ಶರೀರವನ್ನು ಶನಿವಾರ ಬೆಳಿಗ್ಗೆ 8:30 ರಿಂದ 9:30 ರವರೆಗೆ ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಪ್ರಧಾನ ಕಚೇರಿಯಲ್ಲಿ ಸಾರ್ವಜನಿಕರಿಗೆ ಮತ್ತು ಕಾಂಗ್ರೆಸ್ ಕಾರ್ಯಕರ್ತರಿಗೆ ಗೌರವ ಸಲ್ಲಿಸಲು ಅವಕಾಶ ಕಲ್ಪಿಸಲಾಗುವುದು. ಬೆಳಿಗ್ಗೆ 9.30ಕ್ಕೆ ಎಐಸಿಸಿ ಕಚೇರಿಯಿಂದ ಅಂತಿಮ ಯಾತ್ರೆ ಆರಂಭವಾಗಲಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ತಿಳಿಸಿದ್ದಾರೆ.
ಅವರು ಕೊನೆಯುಸಿರೆಳೆದ ಏಮ್ಸ್ನ ಸಭಾಂಗಣಗಳಿಂದ ಹಿಡಿದು ಗೌರವ ಸಲ್ಲಿಸಲು ಜನರು ಸೇರುವ ಎಐಸಿಸಿ ಪ್ರಧಾನ ಕಚೇರಿಯವರೆಗೆ, ಸಿಂಗ್ ಅವರ ನಿರ್ಗಮನವು ಪಕ್ಷಾತೀತವಾಗಿ ನಾಯಕರನ್ನು ಒಟ್ಟುಗೂಡಿಸಿದೆ ಮತ್ತು ಪ್ರಪಂಚದಾದ್ಯಂತದ ಸಂತಾಪ ಸಂದೇಶಗಳನ್ನು ತಂದಿದೆ.