ಬೆಂಗಳೂರು: ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರ ( JDS national president ) ಆಯ್ಕೆಗಾಗಿ ಇಂದು ಮಹತ್ವದ ಸಭೆ ಜೆಡಿಎಸ್ ಕಚೇರಿಯಲ್ಲಿ ( JDS Office ) ನಡೆಯಿತು. ಈ ಸಭೆಯಲ್ಲಿ ಮತ್ತೊಂದು ಅವಧಿಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ( Farmer PM HD Devegowdha ) ಅವರು ಪುನರಾಯ್ಕೆ ಮಾಡಲಾಗಿದೆ.
ಇಂದು ಜೆಪಿ ಭವನದಲ್ಲಿ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಯಿತು. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ( Farmer Prime Minister HD Devegowdha ) ಅವರು, ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ( Farmer CM HD Kumaraswamy ) ಅವರು ಭಾಗಿಯಾಗಿದ್ದರು.
ಶಿವಮೊಗ್ಗ: ಜಿಲ್ಲೆಯಲ್ಲಿ ಪವಿತ್ರ ಮಣ್ಣು ಸಂಗ್ರಹ ಅಭಿಯಾನ ಯಶಸ್ವಿಗೆ ಕ್ರಮ – ಜಿಲ್ಲಾಧಿಕಾರಿ ಡಾ.ಸೆಲ್ವಮಣಿ
ಪಕ್ಷದ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಅವಿರೋಧವಾಗಿ ಆಯ್ಕೆ ಮಾಡಲು ಕಾರ್ಯಕಾರಿಣಿಯಲ್ಲಿ ಚರ್ಚೆ ನಡೆಯಿತು.
ಮಾಜಿ ಪ್ರಧಾನಿಗಳೇ ಆಗಬೇಕು ಎಂದು ಎಲ್ಲ ರಾಜ್ಯ ಪ್ರತಿನಿಧಿಗಳ ಒಮ್ಮತ ಅಭಿಪ್ರಾಯ ವ್ಯಕ್ತಪಡಿಸಿದರು. 13 ರಾಜ್ಯಗಳ ಪ್ರತಿನಿಧಿಗಳು ಭಾಗಿ, ಕೇರಳದ ಮಾಜಿ ಸಚಿವರು, ಹಾಲಿ ಶಾಸಕರು ಸೇರಿ ವಿವಿಧ ರಾಜ್ಯಗಳ ಪ್ರತಿನಿಧಿಗಳು ಭಾಗಿಯಾಗಿದ್ದರು.
ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-2022ರಲ್ಲಿ ತಿದ್ದುಪಡಿಗಾಗಿ ಮಾಡಲಾದ ಶಿಫಾರಸ್ಸು ಸರಕಾರಕ್ಕೆ ಸಲ್ಲಿಕೆ
ಕೇರಳದ ಇಂಧನ ಸಚಿವ ಕೃಷ್ಣನ್ ಕುಟ್ಟಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಭಾಗಿಯಾಗಿದ್ದರು. ಇಂತಹ ಸಭೆಯಲ್ಲಿ ಮತ್ತೊಂದು ಅವಧಿಗೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರನ್ನಾಗಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಅವರನ್ನು ಪುನರಾಯ್ಕೆ ಮಾಡಲಾಗಿದೆ.