ರಾಜಸ್ಥಾನ: ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ( Former Rajasthan chief minister Ashok Gehlot ) ಅವರಿಗೆ ಕೋವಿಡ್-19 ಸೋಂಕು ( Covid19 Case ) ತಗುಲಿರುವುದು ದೃಢಪಟ್ಟಿದೆ. ಇದಲ್ಲದೇ ಹಂದಿ ಜ್ವರ ಕೂಡ ತಗುಲಿರೋದು ಪರೀಕ್ಷೆಯ ವರದಿಯಲ್ಲಿ ದೃಢಪಟ್ಟಿದೆ.
ಈ ಕುರಿತಂತೆ ಅವರ ಕಚೇರಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದಂತ ರಾಜಸ್ಥಾನದ ಮಾಜಿ ಸಿಎಂ ಅಶೋಕ್ ಗೆಹ್ಲೋಟ್ ಅವರನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಅವರ ಪರೀಕ್ಷೆಯ ವರದಿ ಬಂದಿದ್ದು, ಅವರಿಗೆ ಕೋವಿಡ್-19 ಪಾಸಿಟಿವ್ ( Covid19 Positive ) ಎಂಬುದಾಗಿ ದೃಢಪಟ್ಟಿದೆ ಎಂದಿದೆ.
ಇನ್ನೂ ಇದಷ್ಟೇ ಅಲ್ಲದೇ ಜ್ವರದಿಂದ ಬಳಲುತ್ತಿದ್ದ ಅವರು ಸ್ವಂ ಪ್ಲೂ ಪರೀಕ್ಷೆಗೂ ಒಳಗಾಗಿದ್ದರು. ಅದರಲ್ಲಿ ಅಶೋಕ್ ಗೆಹ್ಲೋಟ್ ಅವರಿಗೆ ಹಂದಿ ಜ್ವರ ( swine flu ) ತಗುಲಿರೋದು ದೃಢಪಟ್ಟಿದೆ ಎಂಬುದಾಗಿ ಮಾಹಿತಿ ನೀಡಿದೆ.
‘ಅಂಗನವಾಡಿ ಕಾರ್ಯಕರ್ತೆ’ಯರಿಗೆ ಗುಡ್ ನ್ಯೂಸ್: ಜೀವ ವಿಮೆ, 2 ಲಕ್ಷದವರೆಗೂ ‘ಅಪಘಾತ ವಿಮೆ’ ಜಾರಿ
‘SSLC, ದ್ವಿತೀಯ PUC ವಿದ್ಯಾರ್ಥಿ’ಗಳಿಗೆ ಮಹತ್ವದ ಮಾಹಿತಿ: ಈ 20 ಅಂಶಗಳ ಕಾರ್ಯಕ್ರಮ ರೂಪಿಸಿದ ‘ಪರೀಕ್ಷಾ ಮಂಡಳಿ’