ಬೆಂಗಳೂರು : ಕಾಂಗ್ರೆಸ್ ಪ್ರತಿಭಟನೆ ವೇಳೆ ಮಾಜಿ ಸ್ವೀಕರ್ ರಮೇಶ್ ಕುಮಾರ್ ಹೇಳಿಕೆ ನೀಡಿದ ವಿಚಾರವಾಗಿ ಮಾತನಾಡಿ, ಕಾಂಗ್ರೆಸ್ನವರು ಏನು ಮಾಡಿದ್ದಾರೆ ಅನ್ನೋದನ್ನು ʻ ರಮೇಶ್ ಕುಮಾರ್ ಸತ್ಯ ಬಾಯಿಬಿಟ್ಟಿದ್ದಾರೆʼ ಎಂದು ಗೃಹಸಚಿವ ಅರಗ ಜ್ಞಾನೇಂದ್ರ ವಾಗ್ದಾಳಿ ನಡೆಸಿದ್ದಾರೆ.
ಬಿಹಾರದ ಗೋಪಾಲ್ಗಂಜ್ನಲ್ಲಿ ಭೀಕರ ರಸ್ತೆ ಅಪಘಾತ : ಮೂರು ವಾಹನಗಳ ನಡುವೆ ಡಿಕ್ಕಿ, ಐವರಿಗೆ ಗಾಯ |Road accident
ನ್ಯಾಷನಲ್ ಹೆರಾಲ್ಡ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯನ್ನು ಜಾರಿ ನಿರ್ದೇಶನಾಲಯ (ಇಡಿ) ಕಚೇರಿಯಲ್ಲಿ ವಿಚಾರಣೆ ವಿರೋಧಿಸಿದ ಕೆಪಿಸಿಸಿ ನೇತೃತ್ವದಲ್ಲಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಮಾತನಾಡಿ ಗಾಂಧಿ ಕುಟುಂಬ ಹೆಸರಲ್ಲಿ 3-4 ತಲೆಮಾರುಗಳಿಗೆ ಆಗುವಷ್ಟು ಹಣ, ಆಸ್ತಿ ಮಾಡಿಕೊಂಡ ನಾವು ಈಗ ಗಾಂಧಿ ಕುಟುಂಬದ ಋಣ ತೀರಿಸಬೇಕಿದೆ.
ಬಿಹಾರದ ಗೋಪಾಲ್ಗಂಜ್ನಲ್ಲಿ ಭೀಕರ ರಸ್ತೆ ಅಪಘಾತ : ಮೂರು ವಾಹನಗಳ ನಡುವೆ ಡಿಕ್ಕಿ, ಐವರಿಗೆ ಗಾಯ |Road accident
“ಗಾಂಧಿ ಕುಟುಂಬದ ಋಣ ತೀರಿಸದೇ ಹೋದರೆ ತಿನ್ನುವ ಅನ್ನಕ್ಕೆ ಹುಳ ಬೀಳುತ್ತದೆ. ಪಕ್ಷ ಕುಟುಂಬ ಇದ್ದಂತೆ, ಕುಟುಂಬ ಎಂದ ಮೇಲೆ ಸಣ್ಣ ಪುಟ್ಟ ಮನಸ್ತಾಪಗಳೆಲ್ಲವು ಸಹಜ. ಅವೆಲ್ಲವುಗಳನ್ನು ಬದಿಗೊತ್ತಿ ನಾವೆಲ್ಲರು ಒಂದಾಗಬೇಕು. ಸಂಕಷ್ಟದಲ್ಲಿರುವ ಸೋನಿಯಾ ಅವರೊಂದಿಗೆ ನಿಲ್ಲಬೇಕು. ಆಗ ಮಾತ್ರ ನಾವು ತಿನ್ನುವ ಎರಡು ಹೊತ್ತಿನ ಊಟಕ್ಕೆ ಸಾರ್ಥಕ ಬರುತ್ತದೆ” ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದರು.
ಬಿಹಾರದ ಗೋಪಾಲ್ಗಂಜ್ನಲ್ಲಿ ಭೀಕರ ರಸ್ತೆ ಅಪಘಾತ : ಮೂರು ವಾಹನಗಳ ನಡುವೆ ಡಿಕ್ಕಿ, ಐವರಿಗೆ ಗಾಯ |Road accident
ಈ ವಿಚಾರವಾಗಿ ಗೃಹಸಚಿವ ಅರಗ ಜ್ಞಾನೇಂದ್ರ ಮಾತನಾಡಿ ಮೇಶ್ ಕುಮಾರ್ ಸತ್ಯ ಬಾಯಿಬಿಟ್ಟಿದ್ದಾರೆ. ಏನು ಮಾಡಿದ್ದೇವೆ ಎಂಬುದನ್ನು ಅವರೇ ಹೇಳಿದ್ದಾರೆ. ರಮೇಶ್ ಕುಮಾರ್ ಮಾತಿನಲ್ಲಿ ತೂಕವಿದೆ ಎಂದು ಮಾಧ್ಯಮಗಳಿಗೆ ಹೇಳಿಕೆಯನ್ನು ನೀಡಿದ್ದಾರೆ