ನಾಳೆ ಮೈಸೂರು ದಸರಾ ಮೃತ ‘ಅರ್ಜುನ ಆನೆ’ ಸಮಾಧಿಗೆ ಶಂಕುಸ್ಥಾಪನೆ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ಹಾಸನ ಜಿಲ್ಲೆ ಯಸಳೂರು ಅರಣ್ಯ ವಲಯದ ಡಬ್ಬಲಿ ಕಟ್ಟೆ ನೆಡುತೋಪಿನಲ್ಲಿರುವ ಅರ್ಜುನ ಆನೆಯ ಸಮಾಧಿ ಸ್ಥಳದಲ್ಲಿ ಸ್ಮಾರಕ ನಿರ್ಮಾಣಕ್ಕೆ ಜು.6ರ ನಾಳೆ ಮಧ್ಯಾಹ್ನ 12.30ಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ಕಳೆದ ಡಿಸೆಂಬರ್ 4ರಂದು ಯಸಳೂರು ಬಳಿ ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ, ಮದವೇರಿ ದಾಳಿ ಮಾಡಿದ ಆನೆಯೊಂದಿಗೆ ವೀರಾವೇಶದಿಂದ ಹೋರಾಡಿ ಹುತಾತ್ಮನಾದ ದಸರಾ ಆನೆ ಅರ್ಜುನನಿಗೆ ಸ್ಮಾರಕ ನಿರ್ಮಿಸುವುದಾಗಿ ಸರ್ಕಾರ ಘೋಷಿಸಿತ್ತು, ಅದರಂತೆ … Continue reading ನಾಳೆ ಮೈಸೂರು ದಸರಾ ಮೃತ ‘ಅರ್ಜುನ ಆನೆ’ ಸಮಾಧಿಗೆ ಶಂಕುಸ್ಥಾಪನೆ: ಸಚಿವ ಈಶ್ವರ ಖಂಡ್ರೆ