ಕಡೂರು : ಸೆ.24ರಂದು ಕಡೂರು ಬಸ್ ನಿಲ್ದಾಣದ ಆವರಣದಲ್ಲಿ ಕಡೂರು ನೂತನ ಬಸ್ ನಿಲ್ದಾಣ ನಿರ್ಮಾಣದ ಶಂಕುಸ್ಥಾಪನೆ ಹಾಗೂ ಕಡೂರು ಬಸ್ ಘಟಕದಲ್ಲಿ ನಿರ್ಮಿಸಿರುವ ಸಿಬ್ಬಂದಿ ವಸತಿಗೃಹಗಳ ಉದ್ಘಾಟನೆಯನ್ನು ಹಾಗೂ ತರೀಕೆರೆ ಬಸ್ ನಿಲ್ದಾಣದ ಆವರಣದಲ್ಲಿ ತರೀಕೆರೆ ಬಸ್ ನಿಲ್ದಾಣದ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆಯನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿಯವರು ನೆರವೇರಿಸಿದರು. ಸಾರ್ವಜನಿಕರ ಅನುಕೂಲಕ್ಕಾಗಿ ಅತ್ಯಾಧುನಿಕವಾದ, ಸುಸಜ್ಜಿತವಾದ ಬಸ್ ನಿಲ್ದಾಣವನ್ನು ನಿರ್ಮಾಣ ಮಾಡಲಿದ್ದು, ಇದರ ಸದುಪಯೋಗವಾಗಲಿ ಎಂದರು.
ಕಡೂರು ಮತ್ತು ತರೀಕೆರೆ ತಾಲ್ಲೂಕು ಕೇಂದ್ರಗಳಾಗಿದ್ದು, ರಾಷ್ಟ್ರೀಯ ಹೆದ್ದಾರಿಯಲ್ಲಿರುವುದರಿಂದ ಸಮರ್ಪಕ ವ್ಯವಸ್ಥೆ ಇರುವ ಸುಸಜ್ಜಿತ ನಿಲ್ದಾಣಗಳ ಅಗತ್ಯತೆ ಇರುವ ಹಿನ್ನೆಲೆಯಲ್ಲಿ ಹೊಸ ಬಸ್ ನಿಲ್ದಾಣಗಳ ನಿರ್ಮಾಣ ಕಾಮಗಾರಿಯನ್ನು ಮಾಡಲಾಗುತ್ತಿದೆ ಎಂದು ತಿಳಿಸಿದರು.
ಕಡೂರು ಶಾಸಕರಾದಆನಂದ್ ಕೆ.ಎಸ್ ಹಾಗೂ ತರೀಕೆರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಹೆಚ್.ಶ್ರೀನಿವಾಸ್ ಅವರು ಕ್ಷೇತ್ರದ ಸಮಗ್ರ ಅಭಿವೃದ್ದಿಗೆ ಸಹಕರಿಸಿ, ಹೆಚ್ಚಿನ ಬಸ್ಸುಗಳನ್ನು ನೀಡುವ ಮೂಲಕ ಗ್ರಾಮೀಣ ಭಾಗಗಳಿಗೆ ಹೆಚ್ಚಿನ ಮಟ್ಟದಲ್ಲಿ ಬಸ್ಸುಗಳನ್ನು ಸಂಚರಿಸಲು ಸಹಕಾರವನ್ನು ನೀಡುವಂತೆ ಸಾರಿಗೆ ಸಚಿವರಲ್ಲಿ ಮನವಿ ಮಾಡಿದರು.
ಕಾರ್ಯಕ್ರಮದಲ್ಲಿ ಹಾಸನ ಮಾನ್ಯ ಲೋಕಸಭಾ ಸದಸ್ಯರಾದ ಶ್ರೇಯಸ್ ಎಂ.ಪಟೇಲ್ ಅವರು ಸಾರಿಗೆ ಸಂಸ್ಥೆ ವತಿಯಿಂದ ಶಕ್ತಿ ಯೋಜನೆಯನ್ನು ಸಮರ್ಪಕವಾಗಿ ನಿರ್ವಹಿಸುತ್ತಿರುವ ಬಗ್ಗೆ ಶ್ಲಾಘನೆಯನ್ನು ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಕಡೂರು ಪುರಸಭೆ ಅಧ್ಯಕ್ಷರಾದ ಭಂಡಾರಿ ಶ್ರೀನಿವಾಸ್ , ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಕಲ್ಲೇಶ್ ಹಾಗೂ ತರೀಕೆರೆ ಪುರಸಭೆ ಅಧ್ಯಕ್ಷರಾದ.ವಸಂತಕುಮಾರ್ ಕವಾಲಿ, ಉಪಾಧ್ಯಕ್ಷರಾದ ಪಾರ್ವತಮ್ಮ, ಅಜ್ಜಂಪುರ ಗ್ಯಾರಂಟಿ ಸಮಿತಿ ಅಧ್ಯಕ್ಷರಾದ ಕುಮಾರ್, ಪುರಸಭೆಯ ಸದಸ್ಯರುಗಳು ಉಪಸ್ಥಿತರಿದ್ದರು.