ಬೆಂಗಳೂರು/ಚಿತ್ರದುರ್ಗ: ನಿನ್ನೆಯಷ್ಟೇ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ8ನೇ ಆರೋಪಿಯಾಗಿದ್ದಂತವರೊಬ್ಬರು ಡಿವೈಎಸ್ಪಿ ಕಚೇರಿಗೆ ತೆರಳಿ ಶರಣಾಗಿದ್ದರು. ಈ ಬೆನ್ನಲ್ಲೇ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಮತ್ತಿಬ್ಬರು ಆರೋಪಿಗಳನ್ನು ಚಿತ್ರದುರ್ಗದಲ್ಲಿ ಬಂಧಿಸಲಾಗಿತ್ತು. ಇದೇ ಸಂದರ್ಭದಲ್ಲಿ ಬೆಂಗಳೂರಲ್ಲಿ ಇನ್ನಿಬ್ಬರು ಸೇರಿದಂತೆ ನಾಲ್ವರು ಆರೋಪಿಗಳನ್ನು ಇಂದು ಬಂಧಿಸಲಾಗಿದೆ.
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿ ತಲೆ ಮರೆಸಿಕೊಂಡಿದ್ದಂತ ಮತ್ತಿಬ್ಬರನ್ನು ಚಿತ್ರದುರ್ಗದ ಡಿವೈಎಸ್ಪಿ, ಬೆಂಗಳೂರಿನ ಕಾಮಾಕ್ಷಿಪಾಳ್ಯ ಠಾಣೆಯ ಪೊಲೀಸರು ಎಡೆಮುರಿಕಟ್ಟಿ ಬಂದಿಸಿದ್ದಾರೆ.
ಇಂದು ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಎ.6 ಆರೋಪಿಯಾಗಿದ್ದಂತ ಜಗ್ಗ ಆಲಿಯಾಸ್ ಜಗದೀಶ್ ಹಾಗೂ ಎ.7 ಆರೋಪಿಯಾಗಿದ್ದಂತ ಅನು ಆಲಿಯಾಸ್ ಅನುಕುಮಾರ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಇವರನ್ನು ಚಿತ್ರದುರ್ಗ ನಗರದಿಂದ ಬಂಧಿಸಲಾಗಿದ್ದು, ಆ ನಂತ್ರ ಬೆಂಗಳೂರಿಗೆ ಕರೆದೊಯ್ಯುತ್ತಿರೋದಾಗಿ ತಿಳಿದು ಬಂದಿದೆ.
ಬೆಂಗಳೂರಲ್ಲಿ ಇಬ್ಬರು ಆರೋಪಿಗಳ ಬಂಧನ
ಇನ್ನೂ ಬೆಂಗಳೂರಲ್ಲಿ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಪೊಲೀಸರು ಪುನೀತ್, ಹೇಮಂತ್ ಎಂಬಾತನನ್ನು ಬಂಧಿಸಿದ್ದಾರೆ. ಈ ಇಬ್ಬರು ಸೇರಿದಂತೆ ನಾಲ್ವರನ್ನು ಕೋರ್ಟ್ ಗೆ ಹಾಜರುಪಡಿಸಿ, ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ಪಡೆಯುವ ಸಾಧ್ಯತೆ ಇದೆ. ಆ ಬಗ್ಗೆ ಕಾದು ನೋಡಬೇಕಿದೆ.
ಗಮನಿಸಿ: ಪರಿಶಿಷ್ಟ ಪಂಗಡದ ಕಾನೂನು ಪದವೀಧರರಿಂದ ಶಿಷ್ಯ ವೇತನಕ್ಕೆ ಅರ್ಜಿ ಆಹ್ವಾನ
ನಾಸಾದಿಂದ ದೊಡ್ಡ ಎಚ್ಚರಿಕೆ! ಅತಿವೇಗದಲ್ಲಿ ಭೂಮಿಯತ್ತ ಬರುತ್ತಿದೆ ಕ್ಷುದ್ರಗ್ರಹ 2024 ಎಲ್ಎಲ್1 | NASA Alert