ಚಿಕ್ಕಬಳ್ಳಾಪುರ : ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಾಟ ವಾದ ದಿನದಂದೇ ರಾತ್ರಿ ಚಿಕ್ಕಬಳ್ಳಾಪುರ ಕ್ಷೇತ್ರದ ಶಾಸಕ ಪ್ರದೀಪ್ ಈಶ್ವರ ಮನೆಯ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದರು ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಅರೆಸ್ಟ್ ಮಾಡಿದ್ದಾರೆ.
ಬಂಧಿತರನ್ನು ಕೌಶಿಕ್, ಚಂದು, ಶ್ರೀನಾಥ್ ಹಾಗೂ ನಿತೀನ್ ಎಂದು ಹೇಳಲಾಗುತ್ತಿದ್ದು, ಚಿಕ್ಕಬಳ್ಳಾಫುರ ನಗರ ಠಾಣೆ ಪೊಲೀಸರು ಈ ನಾಲ್ವರನ್ನು ಬಂಧಿಸಿದ್ದು, ವಿಚಾರಣೆ ನಡೆಸಿದ್ದಾರೆ. ಈ ವೇಳೆ ಮದ್ಯದ ಅಮಲಿನಲ್ಲಿ ಮನೆ ಮೇಲೆ ಕಲ್ಲು ಹೊಡೆದಿದ್ದಾಗಿ ತಿಳಿದುಬಂದಿದೆ. ಜೂನ್ 04ರ ರಾತ್ರಿ 10 ಗಂಟೆ 30 ನಿಮಿಷದ ಸುಮಾರಿಗೆ ಕಲ್ಲು ಎಸೆಯಲಾಗಿತ್ತು. ಘಟನೆಯಲ್ಲಿ ಮನೆಯ ಹಿಂಭಾಗದಲ್ಲಿರುವ ಬೃಹತ್ ಗಾತ್ರದ ಕಿಟಕಿಯ ಗಾಜು ಪುಡಿ ಪುಡಿಯಾಗಿತ್ತು.
ಕಳೆದ ಜೂನ್ 4 ರಂದು ಚಿಕ್ಕಬಳ್ಳಾಪುರ ನಗರದ ಕಂದವಾರದಲ್ಲಿರುವ ಪ್ರದೀಪ್ ಈಶ್ವರ್ ನಿವಾಸಕ್ಕೆ ರಾತ್ರಿ ಕಲ್ಲು ಹೊಡೆದಿದ್ದರು. ಇದರಿಂದ ಮನೆ ಕಿಟಕಿ ಗಾಜು ಪುಡಿಪುಡಿಯಾಗಿತ್ತು. ಈ ಸಂಬಂಧ ಚಿಕ್ಕಬಳ್ಳಾಫುರ ನಗರ ಠಾಣೆ ಪೊಲೀಸರು ಸ್ಥಳಕ್ಕೆ ದೌಡಾಯಿಸಿ ಪರಿಶೀಲನೆ ನಡೆಸಿ ಬಳಿಕ ಪ್ರಕರಣ ದಾಖಲಿಸಿಕೊಂಡಿದ್ದರು. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.