ಹುಬ್ಬಳ್ಳಿ : ಇಡೀ ಕರ್ನಾಟಕದಲ್ಲಿ ಡೆಂಗ್ಯೂ ಹಾವಳಿ ಹೆಚ್ಚಾಗಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಡೆಂಘಿಯಿಂದ ನಾಲ್ವರ ಸಾವಾಗಿದೆ ಎಂದು ಹುಬ್ಬಳ್ಳಿಯಲ್ಲಿ ವಿಧಾನಸಭೆಯ ವಿಪಕ್ಷ ಉಪನಾಯಕ ಅರವಿಂದ್ ಬೆಲ್ಲದ ಹೇಳಿಕೆ ನೀಡಿದರು.
ಇಂದು ಅವರು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಿಮ್ಸ್ ಆಸ್ಪತ್ರೆಯಲ್ಲಿ ಒಳ್ಳೆಯ ಚಿಕಿತ್ಸೆ ಕೊಡುತ್ತಿದ್ದಾರೆ. ರಾಜ್ಯ ಸರ್ಕಾರ ಡೆಂಗ್ಯೂ ಕಡೆಗೆ ಹೆಚ್ಚಿನ ಗಮನ ಕೊಡಬೇಕು. ಡೆಂಗ್ಯೂಗೆ ಕಿಮ್ಸ್ ನಲ್ಲಿ ಈವರೆಗೆ ನಾಲ್ವರು ಮಕ್ಕಳು ಬಲಿಯಾಗಿದ್ದಾರೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ 70ಕ್ಕೂ ಹೆಚ್ಚು ರೋಗಿಗಳಾಗಿದ್ದಾರೆ.ಕಿಮ್ಸ್ ಆಸ್ಪತ್ರೆಯಲ್ಲಿ ಈವರಿಗೆ 1,200 ಕ್ಕೂ ಹೆಚ್ಚು ಟೆಸ್ಟ್ ಮಾಡಿದ್ದಾರೆ ಎಂದರು.
ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ರಾಜ್ಯಾದ್ಯಂತ ಪ್ರವಾಸ ಮಾಡಬೇಕು. ಆಸ್ಪತ್ರೆಗೆ ಭೇಟಿ ನೀಡಿ ರೋಗಿಗಳ ಬಗ್ಗೆ ಮಾಹಿತಿ ಪಡೆದುಕೊಳ್ಳಬೇಕು. ಧಾರವಾಡ ಜಿಲ್ಲೆಯಲ್ಲೂ ಡೆಂಗ್ಯೂ ಪ್ರಕರಣಗಳು ಹೆಚ್ಚಾಗಿವೆ. ಅದರಲ್ಲೂ ಮಕ್ಕಳಲ್ಲೂ ಹೆಚ್ಚಿನ ಪ್ರಮಾಣದಲ್ಲಿ ಡೆಂಗಿ ಕಂಡುಬರುತ್ತದೆ.ಆರೋಗ್ಯ ಸಚಿವರು ಬೆಂಗಳೂರು ನಗರ ಬಿಟ್ಟು ಹೊರಗಡೆ ಬರಬೇಕು ಎಂದು ಹುಬ್ಬಳ್ಳಿಯಲ್ಲಿ ವಿಧಾನಸಭೆ ವಿಪಕ್ಷ ಉಪನಾಯಕ ಬೆಲ್ಲದ ಹೇಳಿಕೆ ನೀಡಿದರು.
ಸ್ಪಷ್ಟನೆ ನೀಡಿದ ಕಿಮ್ಸ್ ಆಸ್ಪತ್ರೆಯ ನಿರ್ದೇಶಕ
ಅರವಿಂದ್ ಬೆಲ್ಲದ್ ಅವರ ಹೇಳಿಕೆಗೆ ಸ್ಪಷ್ಟನೆ ನೀಡಿದ, ಕಿಮ್ಸ್ ಆಸ್ಪತ್ರೆಯ ವೈದ್ಯ SF ಕಮ್ಮಾರ್ ಅವರು ಕಿಮ್ಸ್ ಆಸ್ಪತ್ರೆಯ ಮೆಡಿಸನ್ ವಾರ್ಡ್ ನಲ್ಲಿ ಯಾವುದೇ ಸಾವು ಆಗಿಲ್ಲ. ಧಾರವಾಡ ಜಿಲ್ಲೆಯಲ್ಲಿ ಡೆಂಗ್ಯೂ ಇಂದ ಯಾವುದೇ ಡೆತ್ ಆಗಿಲ್ಲ. ಬೇರೆ ಜಿಲ್ಲೆಗಳಿಂದ ಬಂದಿರುವ ನಾಲ್ವರು ರೋಗಿಗಳ ಸಾವಾಗಿದೆ.ಮೆಡಿಸನ್ ವಾರ್ಡ್ ನ ಐಸಿಯು ನಲ್ಲಿ ಇಬ್ಬರು ರೋಗಿಗಳು ಇದ್ದಾರೆ. ಪಿಡಿಯಾರ್ಟಿಕ ವಾರ್ಡ್ ನಲ್ಲಿ 18 ಮಕ್ಕಳು ಐಸಿಯು ನಲ್ಲಿ ಇದ್ದಾರೆ. ಜನರು ಯಾರು ಗಾಬರಿ ಪಡುವ ಅಗತ್ಯವಿಲ್ಲ ಎಂದು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯ ನಿರ್ದೇಶಕ ಡಾಕ್ಟರ್ ಎಸ್ ಎಫ್ ಕಮ್ಮಾರ್ ಹೇಳಿಕೆ ನೀಡಿದರು.