ಒಡಿಶಾ: ಒಡಿಶಾದ ಬರಗಢ್ ಜಿಲ್ಲೆಯ ಮನೆಯೊಂದರಲ್ಲಿ ಭಾನುವಾರ ಸಂಜೆ ನಾಲ್ಕು ಕೊಳೆತ ಶವಗಳು ಪತ್ತೆಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
ಭೇದನ್ ಪೊಲೀಸ್ ಠಾಣಾ ವ್ಯಾಪ್ತಿಯ ಜಂಡೋಲ್ ಗ್ರಾಮದ ಮನೆಯಲ್ಲಿ ಒಂದೇ ಕುಟುಂಬದ ನಾಲ್ವರ ಮೃತದೇಹಗಳು ಪತ್ತೆಯಾಗಿವೆ ಎಂದು ಅವರು ತಿಳಿಸಿದ್ದಾರೆ.
ಕಳೆದ ಎರಡು ದಿನಗಳಿಂದ ಮನೆಯವರು ಹೊರಗೆ ಕಾಣಿಸಿಕೊಂಡಿರಲಿಲ್ಲ. ಮನೆಯ ಬಾಗಿಲು ಒಳಗಿನಿಂದ ಲಾಕ್ ಆಗಿತ್ತು ದುರ್ವಾಸನೆ ಕೂಡ ಬರುತ್ತಿತ್ತು. ಇದ್ರಿಂದ ಅನುಮಾನಗೊಂಡ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಘಟನಾ ಸ್ಥಳಕ್ಕೆ ಬಂದು ಪರಿಶೀಲಿಸಿದ ಪೊಲೀಸರು ಮನೆಯ ಬಾಗಿಲು ಮುರಿದು ಒಳಗೆ ಹೋಗಿ ನೋಡಿದಾಗ ಸವಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಇಂದು ಬೆಳಿಗ್ಗೆ ವಿಧಿವಿಜ್ಞಾನ ತಜ್ಞರು ಮತ್ತು ಕಾರ್ಯನಿರ್ವಾಹಕ ಮ್ಯಾಜಿಸ್ಟ್ರೇಟ್ ಸಮ್ಮುಖದಲ್ಲಿ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ಮನೆಯಿಂದ ಸ್ಥಳಾಂತರಿಸಲಾಗಿದೆ. ಮನೆಗೆ ಸೀಲ್ ಮಾಡಲಾಗಿದೆ. ತನಿಖೆ ನಡೆಯುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
BIG UPDATE: ಗುಜರಾತ್ನಲ್ಲಿ ಕೇಬಲ್ ಸೇತುವೆ ಕುಸಿತ ದುರಂತ: ಸಾವಿನ ಸಂಖ್ಯೆ 141ಕ್ಕೆ ಏರಿಕೆ
BIGG NEWS : ರಾಜ್ಯದಲ್ಲಿ ಮತ್ತೆ 40% ಕಮಿಷನ್ ಸದ್ದು : ಗುತ್ತಿಗೆದಾರನಿಂದ ದಯಾಮರಣ ಕೋರಿ ರಾಷ್ಟ್ರಪತಿಗೆ ಪತ್ರ!
BIG UPDATE: ಗುಜರಾತ್ನಲ್ಲಿ ಕೇಬಲ್ ಸೇತುವೆ ಕುಸಿತ ದುರಂತ: ಸಾವಿನ ಸಂಖ್ಯೆ 141ಕ್ಕೆ ಏರಿಕೆ