ಬೆಂಗಳೂರು: ಉದ್ಯಮಿಯೊಬ್ಬರ ಕಂಪನಿ ಮೇಲೆ ದಾಳಿ ನಡೆಸಿ, ಅವರಿಂದ ಹಣ ಸುಲಿಗೆ ಮಾಡಿದ ಆರೋಪದಡಿ ಬಂಧನಕ್ಕೆ ಒಳಗಾಗಿದ್ದಂತ ಜಿಎಸ್ಟಿ ಇಲಾಖೆಯ ಬೆಂಗಳೂರಿನ ನಾಲ್ವರು ಅಧಿಕಾರಿಗಳನ್ನು ಸೇವೆಯಿಂದ ಅಮಾನತುಗೊಳಿಸಿ ಆದೇಶಿಸಲಾಗಿದೆ.
ಜಿಎಸ್ಟಿ ಗುಪ್ತಚರ ವಿಭಾಗದ ಮಹಾ ನಿರ್ದೇಶನಾಲಯದ ಬೆಂಗಳೂರು ಪ್ರಾದೇಶಿಕ ಕಚೇರಿ ವ್ಯಾಪ್ತಿಯ ದಕ್ಷಿಣ ವಲಯದ ಅಧೀಕ್ಷಕ ಅಭಿಷೇಕ್, ಹಿರಿಯ ಗುಪ್ತಚರ ಅಧಿಕಾರಿ ಮನೋಜ್ ಸೈನಿ, ನಾಗೇಶ್ ಬಾಬೂ ಹಾಗೂ ಸೋನಾಲಿ ಸಹಾಯ್ ಅವರನ್ನು ಕೇಂದ್ರ ಪರೋಕ್ಷ ತೆರಿಗೆಗಳು ಮತ್ತು ಕಸ್ಟಮ್ಸ್ ಮಂಡಳಿಯು ಅಮಾನತುಗೊಳಿಸಿ ಆದೇಶ ಹೊರಡಿಸಿದೆ.
ಈ ನಾಲ್ವರು ಬೆಂಗಳೂರಿನ ಜಿಎಸ್ಟಿ ಅಧಿಕಾರಿಗಳು ಉದ್ಯಮಿ ಕೇಶವ್ ತಕ್ ಅವರಿಂದ 1.5 ಕೋಟಿ ರೂ ಸುಲಿಗೆ ಮಾಡಿದ್ದರು. ಈ ಸಂಬಂಧ ಸೆ.11ರಂದು ಸಿಸಿಬಿ ಮತ್ತು ಪೂರ್ವ ವಿಭಾಗದ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ, ನಾಲ್ವರನ್ನು ಬಂಧಿಸಲಾಗಿತ್ತು. ಆ ಬಳಿಕ ಅವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು.
ಬಳ್ಳಾರಿ ಜೈಲಲ್ಲಿ ಮತ್ತೊಂದು ಬೇಡಿಕೆ ಇಟ್ಟ ‘ನಟ ದರ್ಶನ್’: ನೀಡಲು ನಿರಾಕರಿಸಿದ ಅಧಿಕಾರಿಗಳು | Actor Darshan