ಬೆಂಗಳೂರು: ಮತದಾರರ ಪಟ್ಟಿ ಪರಿಷ್ಕರಣೆಯ ವೇಳೆಯಲ್ಲಿ ಮಾಹಿತಿ ಕದ್ದ ಆರೋಪದ ಮೇಲೆ ದೂರನ್ನು ಬಿಬಿಎಂಪಿ ನೀಡಲಾಗಿತ್ತು. ಈ ದೂರಿನ ಹಿನ್ನಲೆಯಲ್ಲಿ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.
ನಗರದಲ್ಲಿ ಮತದಾರರ ಪಟ್ಟಿಯ ಪರಿಷ್ಕರಣೆಯ ಅಕ್ರಮ ಹೊರ ಬಿದ್ದಿತ್ತು. ಈ ಸಂಬಂಧ ವಿಪಕ್ಷಗಳ ನಾಯಕರು ರಾಜ್ಯ ಸರ್ಕಾರ, ಬಿಬಿಎಂಪಿಯ ವಿರುದ್ಧ ವಾಗ್ಧಾಳಿ ನಡೆಸಿದ್ದರು. ಈ ಬೆನ್ನಲ್ಲೇ ಅಕ್ರಮ ಸಂಬಂಧ ಬಿಬಿಎಂಪಿಯಿಂದ ಪೊಲೀಸರಿಗೆ ತನಿಖೆ ನಡೆಸುವಂತೆ ದೂರು ನೀಡಲಾಗಿತ್ತು.
BIG BREAKING NEWS: ರಾಜ್ಯ ಸರ್ಕಾರದಿಂದ ಎಲ್ಲಾ ನೇರ ನೇಮಕಾತಿ, ಮುಂಬಡ್ತಿಗೆ ತಡೆ
ಇಂದು ಬಿಬಿಎಂಪಿ ದೂರಿನ ಹಿನ್ನಲೆಯಲ್ಲಿ ಬೆಂಗಳೂರಿನ ಹಲಸೂರು ಗೇಟ್ ಠಾಣೆಯ ಪೊಲೀಸರು ನಾಲ್ವರನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ ಕೋರ್ಟ್ ಮೂಲಕ ತಮ್ಮ ಕಸ್ಟಡಿಗೆ ಪಡೆದು ವಿಚಾರಣೆಯನ್ನು ನಡೆಸುತ್ತಿದ್ದಾರೆ.